AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ; ಮಥುರಾದಲ್ಲಿ ಹೇಮಮಾಲಿನಿ ಬದಲು ಅವರಿಗೆ ಟಿಕೆಟ್ ಸಾಧ್ಯತೆ

Professional boxer Vijender Singh joins BJP: ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಏಪ್ರಿಲ್ 3, ಬುಧವಾರದಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಮಥುರಾ ಕ್ಷೇತ್ರಕ್ಕೆ ಹಾಲಿ ಸಂಸದೆ ಹೇಮಮಾಲಿನಿ ಬದಲು ವಿಜೇಂದರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ. 2019ರಲ್ಲಿ ಕಾಂಗ್ರೆಸ್ ಸೇರಿದ್ದ ವಿಜೇಂದರ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು. ಈಗ ಬಿಜೆಪಿಗೆ ಬಂದಿರುವ ವಿಜೇಂದರ್​ಗೆ ಮಥುರಾ ಟಿಕೆಟ್ ಸಿಗುವ ನಿರೀಕ್ಷೆ ಇದೆ.

ಬಾಕ್ಸರ್ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ; ಮಥುರಾದಲ್ಲಿ ಹೇಮಮಾಲಿನಿ ಬದಲು ಅವರಿಗೆ ಟಿಕೆಟ್ ಸಾಧ್ಯತೆ
ವಿಜೇಂದರ್ ಸಿಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 03, 2024 | 4:32 PM

Share

ನವದೆಹಲಿ, ಏಪ್ರಿಲ್ 3: ಭಾರತದ ಮೊದಲ ವೃತ್ತಿಪರ ಬಾಕ್ಸರ್ ಆಗಿರುವ ವಿಜೇಂದರ್ ಸಿಂಗ್ (Vijender Singh) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚುನಾವಣೆಯ ಹೊಸ್ತಿಲಲ್ಲೇ ಈ ಬೆಳವಣಿಗೆ ಆಗಿದ್ದು, ವಿಜೇಂದರ್ ಅವರು ಮಥುರಾ ಕ್ಷೇತ್ರದಲ್ಲಿ (Lok Sabha elections) ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗುತ್ತಿದೆ. 2019ರಲ್ಲಿ ವಿಜೇಂದರ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸಿದ್ದರು. ಆಗ ಬಿಜೆಪಿಯ ರಮೇಶ್ ಬಿಧೂರಿ ಅವರ ಕೈಯಲ್ಲಿ ಪರಾಜಯಗೊಂಡಿದ್ದರು. ಈ ಬಾರಿ ಬಿಜೆಪಿಗೆ ಬಂದಿರುವ ಅವರು ಇದನ್ನು ಘರ್ ವಾಪ್ಸಿ ಎಂದು ಬಣ್ಣಿಸಿದ್ದಾರೆ.

‘ಇವತ್ತು ನಾನು ಬಿಜೆಪಿ ಸೇರುತ್ತಿದ್ದೇನೆ. ನನಗೆ ಇದು ಘರ್ ವಾಪ್ಸಿಯಂತೆ ಆಗಿದೆ. ನಾವು ಫೈಟ್​ಗೆ ಬೇರೆ ದೇಶಕ್ಕೆ ಹೋದಾಗ ಏರ್​ಪೋರ್ಟ್​​ಗಳಲ್ಲಿ ಸಮಸ್ಯೆಗಳಾಗುತ್ತಿದ್ದುವು. ಈ ಸರ್ಕಾರದ ದೆಸೆಯಿಂದ ನಮಗೆ ಎಲ್ಲಾ ಗೌರವಗಳೂ ಸಿಗುತ್ತಿವೆ,’ ಎಂದು ಅವರು ಇಂದು ಬುಧವಾರ ಹೇಳಿದ್ದಾರೆ.

ಉತ್ತರಪ್ರದೇಶದ ಮಥುರಾದಲ್ಲಿ ಹೇಮ ಮಾಲಿನಿ ಅವರು 2019ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ನಿಂದ ಗೆದ್ದು ಸಂಸದೆಯಾಗಿದ್ದರು. ಅದೇ ಕ್ಷೇತ್ರದಲ್ಲಿ ವಿಜೇಂದರ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ಕೊಡುವ ಸಾಧ್ಯತೆ ಇದೆ. ವಿಜೇಂದರ್ ಅವರು ಜಾಟ್ ಸಮುದಾಯದವರಾಗಿರುವುದು ಬಿಜೆಪಿಯ ಲೆಕ್ಕಾಚಾರ ಬದಲಿಸಲು ಕಾರಣ. ಮಥುರಾ ಕ್ಷೇತ್ರ ಪಶ್ಚಿಮ ಉತ್ತರಪ್ರದೇಶದಲ್ಲಿ ಬರುತ್ತದೆ. ಈ ಭಾಗ ಮತ್ತು ಹರ್ಯಾಣದಲ್ಲಿ ಜಾಟ್ ಜನರು ಸಾಕಷ್ಟಿದ್ದಾರೆ. ವಿಜೇಂದರ್ ಸೇರ್ಪಡೆಯಿಂದ ಜಾಟ್ ಸಮುದಾಯದವರ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಬಿಜೆಪಿಗೆ ಅನುಕೂಲವಾಗಬಹುದು.

ಇದನ್ನೂ ಓದಿ: Lok Sabha Election 2024: ರಾಹುಲ್ ಗಾಂಧಿ ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

ವಿಜೇಂದರ್ ಸಿಂಗ್ ಸಾಧಾರಣ ಬಾಕ್ಸರ್ ಅಲ್ಲ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ಅವರು. 2008ರ ಬೀಜಿಂಗ್ ಒಲಿಂಪಿಕ್ಸ್​ನಲ್ಲಿ ಅವರು ಕಂಚಿನ ಪದಕ ಗೆದ್ದಿದ್ದರು. ಅಲ್ಲಿಯವರೆಗೆ ಭಾರತದ ಯಾವ ಬಾಕ್ಸರ್ ಕೂಡ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿರಲಿಲ್ಲ. ವಿಜೇಂದರ್ ಅವರು ಕಾಮನ್​ವೆಲ್ತ್ ಕ್ರೀಡಾಕೂಟಗಳಲ್ಲೂ ಬೆಳ್ಳಿ, ಕಂಚಿನ ಪದಕಗಳನ್ನು ಜಯಿಸಿದ್ದಾರೆ. ಬಳಿಕ ವೃತ್ತಿಪರ ಬಾಕ್ಸಿಂಗ್ ಕ್ಷೇತ್ರಕ್ಕೆ ಇಳಿದಿದ್ದಾರೆ. ಇವರು ಭಾರತದ ಮೊದಲ ವೃತ್ತಿಪರ ಬಾಕ್ಸರ್ ಕೂಡ ಹೌದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ