Lok Sabha elections: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್
ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಈ ಮಹತ್ವದ ಬೆಳವಣಿಗೆ ನಡೆದಿದೆ.
ದೆಹಲಿ. ಏ.3: ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಈ ಮಹತ್ವದ ಬೆಳವಣಿಗೆ ನಡೆದಿದೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದರು ಆದರೆ ರಮೇಶ್ ಬಿಧುರಿ ವಿರುದ್ಧ ಸೋತಿದ್ದರು.ನಾನು ರಾಷ್ಟ್ರದ ಹಿತಾಸಕ್ತಿ ಮತ್ತು ಜನರ ಸೇವೆಗಾಗಿ ಬಿಜೆಪಿಗೆ ಸೇರಿದ್ದೇನೆ. ನಾನು ಈ ಮೂಲಕ ಹೆಚ್ಚು ಹೆಚ್ಚು ಜನರಿಗೆ ಸಹಾಯ ಮಾಡಲು ಬಯಸುತ್ತೇನೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸಿಂಗ್, 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದರು ಆದರೆ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋತರು, ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ ವಿರುದ್ಧ ಗೆದ್ದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸಂಸದೆ ಮತ್ತು ನಟಿ ಹೇಮಾ ಮಾಲಿನಿ ಅವರು ಮಥುರಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇಲ್ಲಿ ವಿಜೇಂದರ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ವಿಜೇಂದರ್ ಸಿಂಗ್ ಜಾಟ್ ಸಮುದಾಯದವರಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಹಾಗೂ ಹರಿಯಾಣದಲ್ಲಿ ಬಿಜೆಪಿ ಪ್ರಭಾವವನ್ನು ಹೆಚ್ಚಿಸಲು ಇವರ ಸೇರ್ಪಡೆ ಬಿಜೆಪಿಗೆ ಮುಖ್ಯವಾಗಿದೆ.
ಇದನ್ನೂ ಓದಿ: 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಶೀಲ್ ಮೋದಿ
2008 ರ ಬೀಜಿಂಗ್ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಗೆದ್ದು ಒಲಂಪಿಕ್ ಪದಕವನ್ನು ಗೆದ್ದ ರಾಷ್ಟ್ರದ ಮೊದಲ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಸಿಂಗ್ ಅವರು ಭಾರತೀಯ ಕ್ರೀಡಾ ಇತಿಹಾಸದಲ್ಲಿ ತಮ್ಮದೆ ಇತಿಹಾಸವನ್ನು ಸೃಷ್ಟಿಸಿದ್ದಾರೆ. 2009 ರ ವಿಶ್ವ ಚಾಂಪಿಯನ್‌ಶಿಪ್‌ನಿಂದ ಕಂಚಿನ ಪದಕ ಮತ್ತು 2010 ಕಾಮನ್‌ವೆಲ್ತ್ ಗೇಮ್ಸ್‌ನಿಂದ ಚಿನ್ನವನ್ನು ಗಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:29 pm, Wed, 3 April 24