ಹೈದರಾಬಾದ್: ನಗರದ ಚೆವೆಳ್ಲ ಬಳಿ ಬೋರ್ವೆಲ್ ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಬಾಲಕ ಅಪಾಯದಿಂದ ಪಾರಾಗಿದ್ದಾನೆ.
ಇತರ ಮೂವರಿಗೆ ಗಾಯವಾಗಿದೆ. ಕಾರಿನ ಅತಿವೇಗವೇ ಘಟನೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಒಟ್ಟು ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರೆಲ್ಲರೂ ಹೈದರಾಬಾದ್ನ ತಾಡ್ಚನ್ ಪ್ರದೇಶದಲ್ಲಿ ವಾಸವಿದ್ದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ.
Published On - 11:03 am, Wed, 2 December 20