ಅಪ್ರಾಪ್ತ ಬಾಲಕಿ ಜತೆ ಪ್ರೀತಿ, ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ
ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ ಯುವಕನನ್ನು ಹಿಡಿದು ಥಳಿಸಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಹೋದ 21 ವರ್ಷದ ಯುವಕನನ್ನು ಹುಡುಗಿಯ ಕುಟುಂಬದವರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಶುಕ್ರವಾರ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಿದ್ದಾರೆ.

ಛತ್ತೀಸ್ಗಢ, ಏಪ್ರಿಲ್ 13: ಅಪ್ರಾಪ್ತ ಬಾಲಕಿ(Girl)ಯನ್ನು ಭೇಟಿ ಮಾಡಲು ಹೋಗಿದ್ದ ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ತನ್ನ ಗೆಳತಿಯನ್ನು ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದ ಹುಡುಗನನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಥಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಹೋದ 21 ವರ್ಷದ ಯುವಕನನ್ನು ಹುಡುಗಿಯ ಕುಟುಂಬದವರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಶುಕ್ರವಾರ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಿದ್ದಾರೆ.
ಏಪ್ರಿಲ್ 8 ರ ರಾತ್ರಿ ಮಲ್ಖರೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡೆ ರಾವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಸತ್ನಾಮಿ ಸಮುದಾಯಕ್ಕೆ ಸೇರಿದ ದಾಬ್ರಾ ಪೊಲೀಸ್ ಠಾಣೆ ಪ್ರದೇಶದ ನಿವಾಸಿ ರಾಹುಲ್ ಅಂಚಲ್, ಇತರ ಹಿಂದುಳಿದ ವರ್ಗದ (ಒಬಿಸಿ) 16 ವರ್ಷದ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ.
छत्तीसगढ़ के सक्ति जिले में कुछ गुंडों ने एक दलित युवक को पकड़कर उसे बंधक बना लिया और कपड़े उतारकर बेहरहमी से पीटा।
युवक भूखा-प्यासा तड़पता रहा और बार-बार पानी के लिए गुहार लगाता रहा, लेकिन किसी ने उसे एक घूंट पानी तक नहीं दिया। बेहद दर्दनाक और अमानवीय घटना।#Chhattisgarh pic.twitter.com/Jk6tWRySQH
— Aman Upadhyay (@amansupadhyay) April 11, 2025
ಹುಡುಗಿಯ ಕುಟುಂಬವು ರಾತ್ರಿ ಯುವಕನನ್ನು ತಮ್ಮ ಮನೆಯಲ್ಲಿ ಹಿಡಿದು ಒತ್ತೆಯಾಳಾಗಿ ಇರಿಸಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು ರಾತ್ರಿಯಿಡೀ ರಾಹುಲ್‌ಗೆ ಚಪ್ಪಲಿ, ಕೇಬಲ್‌ಗಳು ಮತ್ತು ಪೈಪ್‌ಗಳಿಂದ ಹೊಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 9 ರ ಬೆಳಿಗ್ಗೆ ಗ್ರಾಮದ ಬೀದಿಗಳಲ್ಲಿ ರಾಹುಲ್‌ನನ್ನು ಬೆತ್ತಲೆಯಾಗಿಸಿ ಥಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ಓದಿ: ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ವ್ಯಕ್ತಿ ಕುಳಿತಿರುವುದನ್ನು ಕಾಣಬಹುದು. ಹಗ್ಗದಿಂದ ಅವನ ಕಾಲುಗಳಿಗೆ ಹೊಡೆಯುತ್ತಿರುವುದು ಈ ವಿಡಿಯೋದಲ್ಲಿದೆ. ಬಾಲಕಿಯ ಪೋಷಕರು ತನ್ನನ್ನು ಕೋಣೆಯಲ್ಲಿ ಕೂಡಿಹಾಕಿ, ನಂತರ ಇತರರಿಗೆ ಕರೆ ಮಾಡಿ ನಂತರ ರಾತ್ರಿಯಿಡೀ ಥಳಿಸಿದ್ದಾರೆ.
ರಾಹುಲ್‌ನನ್ನು ರಾಯಗಢ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಪೊಲೀಸರು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಐವರ ವಿರುದ್ಧ ಎಫ್ಐಆರ್ ದಾಖಲಿಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:35 pm, Sun, 13 April 25