ಬ್ರಾಹ್ಮಣ ಎಂಬುದು ಜಾತಿಯಲ್ಲ, ಶ್ರೇಷ್ಠ ವಿಧಾನದಲ್ಲಿ ಜೀವಿಸುವುದಷ್ಟೇ: ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ

ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್ ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹುಮುಖ್ಯ ಘೋಷಣೆ. ಅವರು ಅದರಂತೆ ಕೆಲಸ ಮಾಡುತ್ತಿದ್ದಾರೆ.  ಇಂದು ಬಿಜೆಪಿ ಎಲ್ಲ ಹಿಂದುಳಿದ ವರ್ಗಗಳ ಏಳ್ಗೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ದಿನೇಶ್ ಶರ್ಮಾ ಹೇಳಿದ್ದಾರೆ.

ಬ್ರಾಹ್ಮಣ ಎಂಬುದು ಜಾತಿಯಲ್ಲ, ಶ್ರೇಷ್ಠ ವಿಧಾನದಲ್ಲಿ ಜೀವಿಸುವುದಷ್ಟೇ: ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್​ ಶರ್ಮಾ
ಬಿಜೆಪಿ ನಾಯಕ ದಿನೇಶ್​ ಶರ್ಮಾ
Follow us
TV9 Web
| Updated By: Lakshmi Hegde

Updated on:Feb 07, 2022 | 10:49 AM

ನೊಯ್ಡಾ: ಬ್ರಾಹ್ಮಣ ಎಂಬುದು ಒಂದು ಜಾತಿಯಲ್ಲ. ಜೀವನ ನಡೆಸುವ ಒಂದು ಶ್ರೇಷ್ಠ ವಿಧಾನ ಎಂದು ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶ (Uttar Pradesh) ಉಪ ಮುಖ್ಯಮಂತ್ರಿಯೂ ಆಗಿರುವ ದಿನೇಶ್​ ಶರ್ಮಾ (Dinesh Sharma) ಹೇಳಿದ್ದಾರೆ. ಅಷ್ಟೇ ಅಲ್ಲ, ನಮ್ಮ ಬಿಜೆಪಿ ಪಕ್ಷ ಯಾವುದೇ ತಾರತಮ್ಯವಿಲ್ಲದೆ, ಎಲ್ಲರಿಗಾಗಿ ಕೆಲಸ ಮಾಡುತ್ತಿದೆ ಎಂದೂ ತಿಳಿಸಿದ್ದಾರೆ. ಗೌತಮ ಬುದ್ಧನಗರದ ಜೇವರ್​​ನಲ್ಲಿ ಬಿಜೆಪಿ ಅಭ್ಯರ್ಥಿ ಧೀರೇಂದ್ರ ಸಿಂಗ್​ ಪರ ಚುನಾವಣಾ ಪ್ರಚಾರ ಸಭೆ ನಡೆಸಿದ ದಿನೇಶ್​ ಶರ್ಮಾ, ಪ್ರತಿಪಕ್ಷಗಳು ಜಾತಿವಾದಿಗಳಂತೆ ವರ್ತಿಸುತ್ತಿವೆ ಎಂದು ಆರೋಪಿಸಿದರು.  ನಾನು ವಿಧಾನಸಭೆ ಚುನಾವಣೆ ಪೂರ್ವ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಆದರೆ ನಾನು ಹೋದ ಬಹುತೇಕ ಕಡೆ, ಬ್ರಾಹ್ಮಣವಾದ ಮತ್ತು ಜಾತಿವಾದದ ಬಗ್ಗೆ ಪಕ್ಷದ ನಿಲುವು ಏನೆಂದು ಪ್ರಶ್ನೆ ಕೇಳಲಾಗುತ್ತಿದೆ ಎಂದು ದಿನೇಶ್ ಶರ್ಮಾ ಹೇಳಿದ್ದಾರೆ. 

ಬ್ರಾಹ್ಮಣ ಸಮುದಾಯದ ಬಗ್ಗೆ ನಿಮ್ಮ ನಿಲುವೇನು ಎಂದು ಅನೇಕರು ನನ್ನ ಬಳಿ ಕೇಳುತ್ತಾರೆ. ಅವರಿಗೆ ನಾನು ನೀಡುವ ಉತ್ತರವೆಂದರೆ, ಬಿಜೆಪಿ ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್​ ಧ್ಯೇಯದಲ್ಲಿ ನಂಬಿಕೆಯಿಟ್ಟಿದೆ. ಅಲ್ಲಿ ಬ್ರಾಹ್ಮಣರು, ಗುಜ್ಜರ್​ಗಳು, ಜಾಟ್ಸ್​ ಎಂಬ ಭೇದ ಭಾವ ಮಾಡುವುದಿಲ್ಲ. ಪ್ರತಿ ಜಾತಿಗೂ ಅದರದ್ದೇ ಆದ ಮಹತ್ವವಿದೆ.  ಹಾಗಾಗಿಯೇ ಪ್ರತಿ ಜಾತಿಯವರೂ ಬಿಜೆಪಿಗೆ ಬೆಂಬಲ ಕೊಡುತ್ತಾರೆ. ಆದರೆ ವೈಯಕ್ತಿಕವಾಗಿ ಹೇಳಬೇಕು ಎಂದರೆ, ನಾನೊಬ್ಬ ಬ್ರಾಹ್ಮಣ, ಅದರ ಬಗ್ಗೆ ನನಗೆ ಅಪಾರ ಗೌರವ ಇದೆ. ಹೆಮ್ಮೆಯೂ ಇದೆ. ಬ್ರಾಹ್ಮಣ ಸಮುದಾಯವನ್ನು ನಾನೆಂದಿಗೂ ಅಗೌರವದಿಂದ ಕಾಣುವುದಿಲ್ಲ ಎಂದು ಹೇಳಿದ್ದಾರೆ.  ಅಷ್ಟೇ ಅಲ್ಲ, ಸರ್ವೇ ಭವಂತು ಸುಖಿನಾ ಎಂಬುದೇ ಬ್ರಾಹ್ಮಣರ ಧ್ಯೇಯ. ಇತರರ ಸಂತೋಷದಲ್ಲಿ ತಮ್ಮ ಸಂತೋಷ ಕಾಣುವವನೇ ಬ್ರಾಹ್ಮಣ ಎಂದೂ ತಿಳಿಸಿದರು.

ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್ ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹುಮುಖ್ಯ ಘೋಷಣೆ. ಅವರು ಅದರಂತೆ ಕೆಲಸ ಮಾಡುತ್ತಿದ್ದಾರೆ.  ಇಂದು ಬಿಜೆಪಿ ಎಲ್ಲ ಹಿಂದುಳಿದ ವರ್ಗಗಳ ಏಳ್ಗೆಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ನಮ್ಮ ಪಕ್ಷದಲ್ಲಿ ಎಲ್ಲ ಜಾತಿ, ಸಮುದಾಯಗಳ ಶಾಸಕರು, ಎಂಎಲ್​ಸಿಗಳು, ಎಂಪಿಗಳು ಇದ್ದಾರೆ. ಬೇರೆ ಪಕ್ಷಗಳಂತೆ ನಾವು ಜಾತಿಗಳ ನಡುವೆ ತಾರತಮ್ಯ ಮಾಡುತ್ತಿಲ್ಲ ಎಂದು ದಿನೇಶ್​ ಶರ್ಮಾ ಹೇಳಿದರು. ಕಳೆದ ಕೆಲವು ದಿನಗಳಿಂದಲೂ ಉತ್ತರಪ್ರದೇಶದಲ್ಲಿ ಬಿಜೆಪಿ ಬ್ರಾಹ್ಮಣರನ್ನು ಕಡೆಗಣಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದಿನೇಶ್​ ಶರ್ಮಾರ ಈ ಹೇಳಿಕೆ ಬಹುಮುಖ್ಯವಾಗಿದೆ.

ಇದನ್ನೂ ಓದಿ: ಓವೈಸಿ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯ ಬಗ್ಗೆ ಸಂಸತ್​​ನಲ್ಲಿ ಹೇಳಿಕೆ ನೀಡಲಿದ್ದಾರೆ ಅಮಿತ್ ಶಾ

Published On - 9:32 am, Mon, 7 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್