ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ

ಉತ್ತರ ಪ್ರದೇಶದಲ್ಲಿ ಬಹುಜನ ಬಿಎಸ್​ಪಿ ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಎಸ್​ಪಿಯನ್ನು ಅಧಿಕಾರಕ್ಕೆ ತರಲು ದಲಿತರು- ಬ್ರಾಹ್ಮಣರು ಒಗ್ಗಟ್ಟಾಗಿ; ಮಾಯಾವತಿ ಕರೆ
ಮಾಯಾವತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 07, 2021 | 7:52 PM

ಲಕ್ನೋ: ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಜನರಿಗೆ ಕೇವಲ ಭರವಸೆ ನೀಡುತ್ತಿದೆ. ಆ ಭರವಸೆಯನ್ನು ಈಡೇರಿಸಲು ಯಾವುದೇ ಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್​ಪಿ) ಅಧಿಕಾರಕ್ಕೆ ಬರಬೇಕೆಂದರೆ ದಲಿತ ಮತ್ತು ಬ್ರಾಹ್ಮಣರು ಒಗ್ಗಟ್ಟಾಗಬೇಕು. ಈ ಚುನಾವಣೆಯಲ್ಲಿ ಬಿಎಸ್​ಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಎಸ್​ಪಿ ಅಧ್ಯಕ್ಷೆ ಮಾಯಾವತಿ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿಯವರನ್ನು ಬಿಎಸ್​ಪಿಯತ್ತ ಸೆಳೆಯುವ ಸಲುವಾಗಿ 1 ತಿಂಗಳಿನಿಂದ ಆಯೋಜಿಸಿರುವ ಪ್ರಬುದ್ಧ ವರ್ಗ ಸಮ್ಮೇಳನದಲ್ಲಿ ಇಂದು ಭಾಗವಹಿಸಿದ್ದ ಮಾಯಾವತಿ, ಬಿಜೆಪಿ ಮತ್ತು ಎಸ್​ಪಿ ದಲಿತರು ಹಾಗೂ ಬ್ರಾಹ್ಮಣರ ಮತಗಳನ್ನು ಪಡೆಯಲು ಏನೇನೋ ಆಮಿಷಗಳನ್ನು ಒಡ್ಡುತ್ತಿವೆ. ಆದರೆ, ಅದ್ಯಾವುದನ್ನೂ ಈಡೇರಿಸಲು ಪ್ರಯತ್ನ ಮಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ಮತ್ತು ಎಸ್‌ಪಿಗಳಂತೆ ಬಿಎಸ್‌ಪಿ ಕೇವಲ ಭರವಸೆ ನೀಡುವ ಪಕ್ಷವಲ್ಲ. ನಾವು ಏನು ಆಶ್ವಾಸನೆ ನೀಡುತ್ತೇವೋ ಅದನ್ನು ಮಾಡಿ ತೋರಿಸುತ್ತೇವೆ. 2007ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ಬಿಎಸ್​ಪಿ ಆಡಳಿತ ನಡೆಸಿದಾಗ ದಲಿತರ ಮತ್ತು ಬ್ರಾಹ್ಮಣರ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು ಎಂದು ಮಾಯಾವತಿ ಹೇಳಿದ್ದಾರೆ.

ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕರೆ ದಲಿತರು ಹಾಗೂ ಬ್ರಾಹ್ಮಣರ ಮೇಲಿನ ದೌರ್ಜನ್ಯದ ಪ್ರಕರಣಗಳ ತನಿಖೆಗೆ ಆದೇಶಿಸುತ್ತೇವೆ. ಹಾಗೇ, ಈ ಬಾರಿಯ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳಿಗೆ ಹೆಚ್ಚು ಟಿಕೆಟ್​ಗಳನ್ನು ನೀಡುತ್ತೇವೆ ಎಂದು ಮಾಯಾವತಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

ಚುನಾವಣೆಯಲ್ಲಿ ಗೆದ್ದರೆ ಪಾರ್ಕ್,ಸ್ಮಾರಕ ನಿರ್ಮಿಸುವುದಿಲ್ಲ: ಬಿಎಸ್​ಪಿ ನಾಯಕಿ ಮಾಯಾವತಿ

(Brahmins Security Top Focus if BSP Wins in Uttar Pradesh Election Mayawati calls for Dalit-Brahmin unity to win Polls)

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ