AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಪ್ರತಿಯೊಂದು ಇಂಚಿಂಚೂ ಬ್ರಹ್ಮೋಸ್ ವ್ಯಾಪ್ತಿಯಲ್ಲಿದೆ: ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ, ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಮತ್ತು 'ಆಪರೇಷನ್ ಸಿಂಧೂರ್' ಯಶಸ್ಸನ್ನು ಶ್ಲಾಘಿಸಿದರು. ಪಾಕಿಸ್ತಾನಕ್ಕೆ ಇದು ಕೇವಲ ಟ್ರೇಲರ್ ಎಂದು ಎಚ್ಚರಿಸಿದರು. ಬ್ರಹ್ಮೋಸ್ ಭಾರತದ ಬಲಿಷ್ಠ ರಕ್ಷಣಾ ಅಸ್ತ್ರವಾಗಿದ್ದು, 'ಮೇಕ್ ಇನ್ ಇಂಡಿಯಾ'ದ ಮಹತ್ವವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಪ್ರತಿಯೊಂದು ಇಂಚಿಂಚೂ ಬ್ರಹ್ಮೋಸ್ ವ್ಯಾಪ್ತಿಯಲ್ಲಿದೆ: ರಾಜನಾಥ್ ಸಿಂಗ್
ಬ್ರಹ್ಮೋಸ್ ಕ್ಷಿಪಣಿ
ಅಕ್ಷಯ್​ ಪಲ್ಲಮಜಲು​​
|

Updated on: Oct 18, 2025 | 2:48 PM

Share

ಲಕ್ನೋ, ಅ.18: ಪಾಕಿಸ್ತಾನಕ್ಕೆ ಬ್ರಹ್ಮೋಸ್ (BrahMos Missile) ಕೊಟ್ಟ ಪೆಟ್ಟು ಇನ್ನು ಮಾಸಿಲ್ಲ, ಮೊದಲ ಬಾರಿ ಆಪರೇಷನ್​​ ಸಿಂಧೂರದ ಮೂಲಕ ಬ್ರಹ್ಮೋಸ್​​ನ್ನು ಬಳಸಲಾಗಿತ್ತು. ಭಾರತದ ಬ್ರಹ್ಮೋಸ್ ಮೂಲಕ ಪಾಕಿಸ್ತಾನ ಬುಡವನ್ನೇ ಅಲುಗಾಡಿಸಿದ್ದು ನಿಜ, ಇದೀಗ ಬ್ರಹ್ಮೋಸ್ ಕಾರ್ಯಚರಣೆ ಬಗ್ಗೆ ದೇಶದ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಮಾತನಾಡಿದ್ದಾರೆ. ಅವರು ಇಂದು (ಅ.18) ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ್ದು, ಈ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದು ಪಾಕಿಸ್ತಾನಕ್ಕೆ ಟ್ರೇಲರ್​ ಅಷ್ಟೇ, ಪಿಚ್ಚರ್​​​ ಇನ್ನು ಬಾಕಿ ಇದೆ. ಭಾರತ ಶಕ್ತಿಶಾಲಿ ಅಸ್ತ್ರವಾದ ಬ್ರಹ್ಮೋಸ್ ಯಾವುದೇ ಕಾರಣಕ್ಕೂ ಶತ್ರು ರಾಷ್ಟ್ರವನ್ನು ಬಿಡುವುದಿಲ್ಲ. ಆಪರೇಷನ್ ಸಿಂಧೂರ್ ಸಮಯದಲ್ಲೂ ಭಾರತ ಬಿಟ್ಟಿಲ್ಲ. ಆಪರೇಷನ್ ಸಿಂಧೂರ್ ಗೆಲುವು ಒಂದು ಸಣ್ಣ ಮಾತಲ್ಲ,ಗೆಲುವು ನಮ್ಮ ಅಭ್ಯಾಸ, ನಮ್ಮ ವಿರೋಧಿಗಳು ಇನ್ನು ಮುಂದೆ ಬ್ರಹ್ಮೋಸ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ದೇಶದ ವಿಶ್ವಾಸವಾಗಿದೆ ಎಂದು ಹೇಳಿದರು. ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಭಾರತದ ಬೆಳೆಯುತ್ತಿರುವ ದೊಡ್ಡ ಅಸ್ತ್ರವಾಗಿದೆ.

ವೇಗ, ನಿಖರತೆ ಮತ್ತು ಶಕ್ತಿಯಿಂದ ಸಂಯೋಜನೆಗೊಂಡಿರುವ ಅಸ್ತ್ರವಾಗಿದೆ. ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತದೆ. ಹಾಗೂ ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್​​ಗೆ ನೊಬೆಲ್​​​​ ಪ್ರಶಸ್ತಿ ಗ್ಯಾರಂಟಿ, ಪಾಕ್-ಅಫ್ಘಾನ್ ನಡುವೆ ಮಧ್ಯಸ್ಥಿಕೆಗೆ ಮುಂದಾದ ಅಮೆರಿಕ ಅಧ್ಯಕ್ಷ

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬ್ರಹ್ಮೋಸ್ ಕ್ಷಿಪಣಿಗಳು ಭಾರತದ ರಕ್ಷಣಾ ಅಗತ್ಯಗಳಲ್ಲಿ ಸ್ವಾವಲಂಬನೆಯನ್ನು ಹೊಂದಿದೆ. ಭಾರತವು ಈಗ ತನ್ನ ಭದ್ರತಾ ಅಗತ್ಯಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ತನ್ನ ಸ್ನೇಹಪರ ರಾಷ್ಟ್ರಗಳ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಎಂದರು. ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡುವ ಮೂಲಕ, ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪ್ರತಿಜ್ಞೆಯನ್ನು ಈಡೇರಿಸುವಲ್ಲಿದೊಡ್ಡ ಹೆಜ್ಜೆಯನ್ನು ಇಟ್ಟಿದೆ ಎಂದು ಹೇಳಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್