ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ

ಬಿಹಾರದಲ್ಲಿ ಆರ್ಕೆಸ್ಟ್ರಾ ನರ್ತಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಪಹರಣಕ್ಕೊಳಗಾದ 24 ವರ್ಷದ ಮಹಿಳೆ, ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಕೆಯ ಧೈರ್ಯದಿಂದ ರಕ್ಷಣೆ ಹಾಗೂ ಒಬ್ಬ ಆರೋಪಿಯ ಬಂಧನ ಸಾಧ್ಯವಾಗಿದೆ. ಬಾಗಿಲು ಒಡೆದು ಪೊಲೀಸರು ಆಕೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ
ಪೊಲೀಸ್
Image Credit source: Indian Express

Updated on: Jan 13, 2026 | 9:32 AM

ಬಿಹಾರ, ಜನವರಿ 13: ಆರ್ಕೆಸ್ಟ್ರಾ ನರ್ತಕಿ(Dancer)ಯನ್ನು ಕೆಲವು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್​ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ.

ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧನ ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ ಗೋಡೌನ್‌ಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಇತರೆ ನಾಲ್ವರು ಪುರುಷರು ಈಗಾಗಲೇ ಅಲ್ಲಿದ್ದರು.

ಬಲವಂತವಾಗಿ ಮದ್ಯ ಸೇವಿಸಿ ನೃತ್ಯ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆರು ಪುರುಷರು ಒಬ್ಬರ ನಂತರ ಒಬ್ಬರು ಅತ್ಯಾಚಾರ ಎಸಗಿದ್ದಾರೆ. ಹಲ್ಲೆಯ ನಂತರ, ಐವರು ಪುರುಷರು ಆಕೆಯನ್ನು ಕೋಣೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಒಳಗೆ ಮಲಗಿದ್ದ.

ಮತ್ತಷ್ಟು ಓದಿ: Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ

ಪರಿಸ್ಥಿತಿಯ ಲಾಭ ಪಡೆದುಕೊಂಡ ಮಹಿಳೆ, ಮಲಗಿದ್ದ ವ್ಯಕ್ತಿಯ ಫೋನ್ ಬಳಸಿ, ಮಧ್ಯರಾತ್ರಿ 12.15 ರ ಸುಮಾರಿಗೆ ತುರ್ತು ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ತುರ್ತು ಕರೆ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊರಗಿನಿಂದ ಬಾಗಿಲು ಲಾಕ್ ಮಾಡಲಾಗಿತ್ತು ಮತ್ತು ಪೊಲೀಸ್ ಸಿಬ್ಬಂದಿ ಗೋಡೌನ್ ಒಳಗೆ ಪ್ರವೇಶಿಸಲು ಬಾಗಿಲು ಒಡೆಯಬೇಕಾಯಿತು ಎಂದು ಅಧಿಕಾರಿ ಹೇಳಿದರು. ಮೂಲದ ಪ್ರಕಾರ, ಸಂತ್ರಸ್ತೆ ಒಳಗೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮದ್ಯದ ಬಾಟಲಿಗಳು ಕೋಣೆಯಲ್ಲಿ ಹರಡಿಕೊಂಡಿವೆ. ಅಲ್ಲಿ ಒಬ್ಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಗಾಯಗೊಂಡ ಮಹಿಳೆಯನ್ನು ಪೂರ್ಣಿಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಸ್ತುತ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಸ್ಥಳೀಯ ನಿವಾಸಿ ಮೊಹಮ್ಮದ್ ಜುನೈದ್ (35) ಎಂದು ಗುರುತಿಸಲಾಗಿದ್ದು, ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಹೊರತಾಗಿ, ಯುವರಿ ಇತರ ಇಬ್ಬರ ಹೆಸರನ್ನು ಹೆಸರಿಸಿದ್ದಾರೆ ಎಂದು ಸಹರಾವತ್ ಹೇಳಿದರು.

ಆರೋಪಿಗಳ ತನಿಖೆ ಮತ್ತು ವಿಚಾರಣೆಯ ಸಮಯದಲ್ಲಿ, ಮಾನವ ಕಳ್ಳಸಾಗಣೆಗೆ ಸಂಬಂಧಿಸಿದ ಸಂಗತಿಗಳು ಸಹ ತಿಳಿದುಬಂದಿದೆ. ಸಂತ್ರಸ್ತೆಯ ಪತಿ ಒಂದು ವರ್ಷದ ಹಿಂದೆ ರಸ್ತೆ ಅಪಘಾತದಲ್ಲಿ ನಿಧನರಾದ್ದರು ಮತ್ತು ಅವರು ಒಂಟಿಯಾಗಿ ವಾಸಿಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us