AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೇಲೆ ಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ

ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿರುವ ಬ್ರೆಜಿಲ್ ಅಧ್ಯಕ್ಷ ಲುಲಾ ಭಾರತ-ಬ್ರೆಜಿಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಈ ವೇಳೆ ಅವರಿಬ್ಬರೂ 'ಪರಸ್ಪರ ಹಿತಾಸಕ್ತಿಯ ವಿಷಯಗಳ' ಕುರಿತು ಚರ್ಚೆ ನಡೆಸಿದ್ದಾರೆ. ಅಮೆರಿಕದಿಂದ ಭಾರತದ ಮೇಲಿನ ವ್ಯಾಪಾರ ಸುಂಕ ಹೆಚ್ಚಳದ ಬೆನ್ನಲ್ಲೇ ಬ್ರೆಜಿಲ್​ನಿಂದ ಮೋದಿಗೆ ಕರೆ ಬಂದಿದೆ.

ಭಾರತದ ಮೇಲೆ ಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷ
Modi With Brazil President
ಸುಷ್ಮಾ ಚಕ್ರೆ
|

Updated on: Aug 07, 2025 | 11:00 PM

Share

ನವದೆಹಲಿ, ಆಗಸ್ಟ್ 7: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಇಂದು (ಗುರುವಾರ) ಬ್ರೆಜಿಲ್‌ನ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಂದ ದೂರವಾಣಿ ಕರೆ ಬಂದಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ಸಹಕಾರದಲ್ಲಿ ಮತ್ತೊಂದು ಹೆಜ್ಜೆಯಾಗಿದೆ. ಫೋನ್ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ ಕಳೆದ ತಿಂಗಳು ಬ್ರೆಜಿಲ್‌ಗೆ ನೀಡಿದ ತಮ್ಮ ಭೇಟಿಯನ್ನು ಪ್ರೀತಿಯಿಂದ ನೆನಪಿಸಿಕೊಂಡಿದ್ದಾರೆ. ಆ ಪ್ರವಾಸವನ್ನು ಸ್ಮರಣೀಯ ಮತ್ತು ಅರ್ಥಪೂರ್ಣವಾಗಿಸಿದ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ ಮೋದಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಬ್ರೆಜಿಲ್ ಅಧ್ಯಕ್ಷ ಲುಲಾ ಅವರೊಂದಿಗೆ ಫೋನ್ ಸಂಭಾಷಣೆ ನಡೆಸಿದೆ. ಬ್ರೆಜಿಲ್‌ಗೆ ನನ್ನ ಭೇಟಿಯನ್ನು ಸ್ಮರಣೀಯ ಮತ್ತು ಅರ್ಥಪೂರ್ಣವಾಗಿಸಿದ ಸೌಹಾರ್ದಯುತ ಆತಿಥ್ಯಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ; ಟ್ರಂಪ್ ಸುಂಕ ಹೆಚ್ಚಳ ಬೆನ್ನಲ್ಲೇ ಅಜಿತ್ ದೋವಲ್ ಮಾಹಿತಿ

ಮುಂಬರುವ ಬ್ರಿಕ್ಸ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕಗಳನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯ ನಡುವೆ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಟ್ರಂಪ್ ಅವರ ಸುಂಕದ ಟೀಕೆಯ ನಡುವೆಯೂ ಇಬ್ಬರೂ ನಾಯಕರು ಪರಸ್ಪರ ಆಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಇದನ್ನೂ ಓದಿ: ಅಮೆರಿಕದ ಸರಕುಗಳ ಮೇಲೆ ಭಾರತವೂ ಶೇ.50ರಷ್ಟು ಸುಂಕ ವಿಧಿಸಬೇಕು; ಟ್ರಂಪ್ ವಿರುದ್ಧ ಶಶಿ ತರೂರ್ ಕಿಡಿ

ದ್ವಿಪಕ್ಷೀಯ ಸಮಸ್ಯೆಗಳ ಹೊರತಾಗಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಲುಲಾ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳು ಮತ್ತು ಪರಸ್ಪರ ಆಸಕ್ತಿಯ ಅವಕಾಶಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಇದು ಅಂತಾರಾಷ್ಟ್ರೀಯ ವಿಷಯಗಳನ್ನು ಸಹಕಾರದಿಂದ ಪರಿಹರಿಸುವ ಅವರ ಹಂಚಿಕೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ