Breaking: ಕಾಂಗ್ರೆಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಗುಲಾಂ ನಬಿ ಬೆನ್ನಲ್ಲೇ ಮತ್ತಷ್ಟು ಹಿರಿಯ ನಾಯಕರ ರಾಜೀನಾಮೆ

ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ 5 ಕಾಂಗ್ರೆಸ್ ಹಿರಿಯ ನಾಯಕರು ರಾಜೀನಾಮೆ ನೀಡಿದ್ದಾರೆ

Breaking: ಕಾಂಗ್ರೆಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಗುಲಾಂ ನಬಿ ಬೆನ್ನಲ್ಲೇ ಮತ್ತಷ್ಟು ಹಿರಿಯ ನಾಯಕರ ರಾಜೀನಾಮೆ
Ghulam Nabi Azad
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 26, 2022 | 3:48 PM

ದೆಹಲಿ: GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಅವರು ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ (Congress Leader), ಸಚಿವ ಗುಲಾಂ ನಬಿ ಆಜಾದ್ (Ghulam Nabi Azad) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೂ ಶುಕ್ರವಾರ (ಆಗಸ್ಟ್ 26) ರಾಜೀನಾಮೆ ನೀಡಿದ್ದಾರೆ. ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಪಕ್ಷವು ಸುಧಾರಿಸಲು ಸಾಧ್ಯವಾಗದ ಸ್ಥಿತಿ ತಲುಪಿದೆ ಎಂದು ಬರೆದಿದ್ದಾರೆ.

ಇತ್ತೀಚೆಗಷ್ಟೇ ಅವರು ಆರೋಗ್ಯದ ಕಾರಣ ಮುಂದಿಟ್ಟು ಜಮ್ಮು ಮತ್ತು ಕಾಶ್ಮೀರ ಘಟಕದ ಪದಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಈ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನವನ್ನು ಮತ್ತೆ ಹೊರಹಾಕಿದ್ದರು. ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ (JKCC) ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು.

ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೇ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್, ಮಾಜಿ ಸಚಿವ ಆರ್ ಎಸ್ ಚಿಬ್ ಗುಲಾಂ ನಬಿ ಅವರನ್ನು ಬೆಂಬಲಿಸಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Published On - 3:34 pm, Fri, 26 August 22

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ