Breaking: PMLA ಪ್ರಕರಣ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್‌ಮುಖ್‌ಗೆ ಜಾಮೀನು

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 04, 2022 | 3:21 PM

ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

Breaking: PMLA ಪ್ರಕರಣ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್‌ಮುಖ್‌ಗೆ ಜಾಮೀನು
Follow us on

ಮಹಾರಾಷ್ಟ್ರ: ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ. ಇಡಿ ಎರಡು ವಾರಗಳ ಕಾಲ ಆದೇಶದ ಕಾರ್ಯಾಚರಣೆಗೆ ತಡೆ ಕೋರಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ದೇಶ್‌ಮುಖ್ ಅವರನ್ನು ಬಂಧಿಸಲಾಗಿತ್ತು ಮತ್ತು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಈ ವರ್ಷದ ಆರಂಭದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಇಡಿ ಪ್ರಕರಣದಲ್ಲಿ ದೇಶ್‌ಮುಖ್‌ಗೆ ಜಾಮೀನು ಸಿಕ್ಕಿದ್ದರೂ, ಕಳೆದ ವರ್ಷ ಏಪ್ರಿಲ್‌ನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬಂಧನದಲ್ಲಿಯೇ ಇರುತ್ತಾರೆ.

ಇದಕ್ಕೂ ಮುನ್ನ, ಎನ್‌ಸಿಪಿ ನಾಯಕನ ಅರ್ಜಿಯು ಆರು ತಿಂಗಳಿನಿಂದ ಬಾಕಿ ಉಳಿದಿರುವುದರಿಂದ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು.

ಎನ್‌ಸಿಪಿಯ ಹಿರಿಯ ನಾಯಕನ ವಯಸ್ಸು (72), ಆರೋಗ್ಯ ಮತ್ತು ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನಲೆಗಳಿಲ್ಲದಿರುವ ಅಂಶವನ್ನು ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್ ಹೇಳಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 4.7 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ದೇಶ್‌ಮುಖ್‌ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದ ನಂತರ ಇಡಿ ಅವರನ್ನು ಬಂಧಿಸಿತ್ತು .

Published On - 3:11 pm, Tue, 4 October 22