AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ

ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಯಾದವ್ ಅವರ ಒಎಸ್‌ಡಿಯಾಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಸಂಗ್ರಹ ಮಾಡಿದ  ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ
Bhola Yadav
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 27, 2022 | 11:41 AM

Share

ದೆಹಲಿ: ಬಿಹಾರದ ಹಿರಿಯ ರಾಜಕಾರಿಣಿ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಅವರ ವಿಶೇಷ ಅಧಿಕಾರಿ (Officer on Specila Duty – OSD) ಆಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (Central Bureau of Investigation – CBI) ಬಂಧಿಸಿದೆ. ಪ್ರಕರಣ ಸಂಬಂಧ ಬಿಹಾರದ ಸುಮಾರು ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಪಾಟ್ನಾ ಮತ್ತು ದರ್ಭಾಂಗದ ತಲಾ ಎರಡು ಸ್ಥಳಗಳಲ್ಲಿ ತನಿಖೆ ನಡೆಯುತ್ತಿದೆ. ಈ ಪೈಕಿ ಒಂದು ಸ್ಥಳವು ಭೋಲಾ ಅವರ ಲೆಕ್ಕಪತ್ರಗಳನ್ನು ನಿರ್ವಹಿಸುವ ಲೆಕ್ಕಪರಿಶೋಧಕರ ಕಚೇರಿಯಾಗಿದೆ. 2004ರಿಂದ 2009ರ ಅವಧಿಯಲ್ಲಿ ನಡೆದಿದ್ದ ರೈಲ್ವೆ ನೇಮಕಾತಿ ಹಗರಣದಲ್ಲಿ ಭೋಲಾ ಯಾದವ್ ಮುಖ್ಯ ಪಾತ್ರ ನಿರ್ವಹಿಸಿದ್ದರು ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ
Image
Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ
Image
Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
Image
PMLA Verdict: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್​ನಿಂದ​ ಇಂದು ಮಹತ್ವದ ತೀರ್ಪು
Image
Sonia Gandhi: ನ್ಯಾಷನಲ್ ಹೆರಾಲ್ಡ್​​ ಪ್ರಕರಣ; ಇಡಿ ಅಧಿಕಾರಿಗಳಿಂದ ಇಂದು ಸೋನಿಯಾ ಗಾಂಧಿ 3ನೇ ಸುತ್ತಿನ ವಿಚಾರಣೆ

ರೈಲ್ವೆಯಲ್ಲಿ ಕೆಲಸ ಕೊಡುವುದಕ್ಕೆ ಪ್ರತಿಯಾಗಿ ಪಾಟ್ನಾದಲ್ಲಿದ್ದ ಬೆಲೆಬಾಳುವ ಆಸ್ತಿಗಳನ್ನು ಭೋಲಾ ಯಾದವ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಅತ್ಯಂತ ಕಡಿಮೆ ಬೆಲೆ ಮಾರಾಟ ಮಾಡಲಾಗುತ್ತಿತ್ತು ಅಥವಾ ಕೊಡುಗೆಯಾಗಿ ನೀಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18ರಂದು ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ ಮತ್ತು ಮಿಸಾ ಭಾರತಿ ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

Published On - 11:11 am, Wed, 27 July 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!