Breaking News: 2007ರ ದ್ವೇಷ ಭಾಷಣ ಪ್ರಕರಣದಲ್ಲಿ ಸಿಎಂ ಯೋಗಿ ಆದಿತ್ಯನಾಥ್​​ಗೆ ಬಿಗ್ ರಿಲೀಫ್; ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ವಜಾ

ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ನಿರಾಕರಣೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ವಜಾಗೊಳಿಸಿದ್ದಾರೆ.

Breaking News: 2007ರ ದ್ವೇಷ ಭಾಷಣ ಪ್ರಕರಣದಲ್ಲಿ ಸಿಎಂ ಯೋಗಿ ಆದಿತ್ಯನಾಥ್​​ಗೆ ಬಿಗ್ ರಿಲೀಫ್; ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ವಜಾ
ಯೋಗಿ ಆದಿತ್ಯನಾಥ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 26, 2022 | 11:58 AM

ನವದೆಹಲಿ: 2007ರ ದ್ವೇಷ ಭಾಷಣ ಪ್ರಕರಣದಲ್ಲಿ (2007 hate speech case) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್​ ಯೋಗಿ ಆದಿತ್ಯನಾಥ್​ ಅವರನ್ನು ವಿಚಾರಣೆಗೊಳಪಡಿಸಲು ಅನುಮತಿ ನಿರಾಕರಿಸಿದೆ. ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ನಿರಾಕರಣೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ (NV Ramana) ವಜಾಗೊಳಿಸಿದ್ದಾರೆ.

2007ರ ದ್ವೇಷ ಭಾಷಣದ ವಿಷಯದಲ್ಲಿ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. 2007ರ ಪ್ರಕರಣದಲ್ಲಿ ಉದ್ಧಟತನದ ಭಾಷಣ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲು ಉತ್ತರ ಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ. ಇದಕ್ಕೂ ಮುನ್ನ ಬುಧವಾರ ಸುಪ್ರೀಂ ಕೋರ್ಟ್​ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈ ವಿಷಯದಲ್ಲಿ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸುವಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ತಿಳಿಸಿತ್ತು.

ಇದನ್ನೂ ಓದಿ: ಸಿಜೆಐ ಎನ್​ವಿ ರಮಣ ನಿವೃತ್ತಿ ಹಿನ್ನೆಲೆ; ಸುಪ್ರೀಂ ಕೋರ್ಟ್​ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ

ಈ ಪ್ರಕರಣದಲ್ಲಿ ಮಂಜೂರಾತಿ ನಿರಾಕರಣೆಯ ವಿಷಯವನ್ನು ಪರಿಶೀಲಿಸುವ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು, ಮಂಜೂರಾತಿಗೆ ಸಂಬಂಧಿಸಿದ ಕಾನೂನು ಪ್ರಶ್ನೆಗಳನ್ನು ಸೂಕ್ತ ಪ್ರಕರಣದೊಂದಿಗೆ ವ್ಯವಹರಿಸಬಹುದು ಎಂದು ಹೇಳಿದೆ.

2007ರಲ್ಲಿ ಯೋಗಿ ಆದಿತ್ಯನಾಥ್ ಅವರು ಸಂಸತ್ ಸದಸ್ಯರಾಗಿದ್ದಾಗ ದ್ವೇಷಪೂರಿತ ಭಾಷಣ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಇತರ ಹಲವರ ವಿರುದ್ಧ ಗೋರಖ್‌ಪುರದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದಿತ್ಯನಾಥ್ ಅವರ ದ್ವೇಷದ ಭಾಷಣದ ನಂತರ, ಗೋರಖ್‌ಪುರದಲ್ಲಿ ಒಂದೇ ದಿನದಲ್ಲಿ ಹಲವಾರು ಹಿಂಸಾಚಾರದ ಘಟನೆಗಳು ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Fri, 26 August 22

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ