Helicopter Crash in Kedarnath: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ; 7 ಮಂದಿ ದುರ್ಮರಣ
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವನ್ನಪ್ಪಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ.
ಕೇದಾರನಾಥ: ಕೇದಾರನಾಥ (Kedarnath) ಬಳಿ ಹೆಲಿಕಾಪ್ಟರ್ (Helicopter)ಪತನಗೊಂಡು 7 ಮಂದಿ ಸಾವಿಗೀಡಾಗಿದ್ದಾರೆ. ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ನಡೆದಿದೆ. ಹೆಲಿಕಾಪ್ಟರ್ನಲ್ಲಿದ್ದ 8 ಜನರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಕೇದಾರನಾಥದ 2 ಕಿ.ಮೀ. ದೂರದಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿಯವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದುರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೇದಾರನಾಥ ಧಾಮ ದೇಗುಲದಿಂದ ಸುಮಾರು 2 ಕಿಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ತನಿಖೆಗೆ ಆದೇಶಿಸಿದ್ದಾರೆ. ಕೇದಾರನಾಥ ಬಳಿಯ ಗರುಡ ಚಟ್ಟಿ ಎಂಬಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಕೆಲವು ಜನರು ಸಾವಿಗೀಡಾಗಿರುವ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ಎಸ್ ಡಿಆರ್ ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ಧಾವಿಸಿವೆ. ಈ ದುರಂತ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
#WATCH | Uttarakhand: A helicopter carrying Kedarnath pilgrims from Phata crashes, casualties feared; administration team left for the spot for relief and rescue work. Further details awaited pic.twitter.com/sDf4x1udlJ
— ANI (@ANI) October 18, 2022
ಯಾತ್ರಿಕರನ್ನು ಹೊತ್ತ ಹೆಲಿಕಾಪ್ಟರ್ ಕೇದಾರನಾಥದಿಂದ ಫಾಟಾ ಹೆಲಿಪ್ಯಾಡ್‌ಗೆ ಹಾರುತ್ತಿತ್ತು. ಅಪಘಾತ ಸಂಭವಿಸಿದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಮತ್ತು ಸ್ಥಳೀಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದರು.
ಕೇದಾರನಾಥದಲ್ಲಿ ಹೆಲಿಕಾಪ್ಟರ್ ಅಪಘಾತವು ಅತ್ಯಂತ ದುರದೃಷ್ಟಕರವಾಗಿದೆ. ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ” ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.
ಉತ್ತರಾಖಂಡದ ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಸಾವುಗಳನ್ನು ಖಚಿತಪಡಿಸಿದ್ದಾರೆ. ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದು ಪತನವಾಗಿದ್ದು ಪ್ರತಿಕೂಲ ಹವಾಮಾನವೇ ದುರಂತಕ್ಕೆ ಕಾರಣ ಎಂದು ನಂಬಲಾಗಿದೆ.
ಅಯಾನ್ ಏವಿಯೇಷನ್ ಪ್ರೈ.ಲಿ. ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದ್ದು ಇದು ಈ ಪ್ರದೇಶದಲ್ಲಿ ಹೆಲಿ ಸೇವೆಗಳನ್ನು ಒದಗಿಸುತ್ತದೆ. “ಪ್ರಾಥಮಿಕ ಮಾಹಿತಿಯ ಪ್ರಕಾರ, ದೆಹಲಿ ಮೂಲದ ಆರ್ಯನ್ ಏವಿಯೇಷನ್‌ಗೆ ಸೇರಿದ VT-RPN ಎಂದು ನೋಂದಾಯಿಸಲಾದ ಬೆಲ್ 407 ಹೆಲಿಕಾಪ್ಟರ್ ಕೇದಾರನಾಥದಿಂದ ಗುಪ್ತಕಾಶಿಗೆ ಹೋಗುವ ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪತನವಾದ ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು.
Published On - 12:32 pm, Tue, 18 October 22