AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
ವಿಮಾನImage Credit source: iStock
TV9 Web
| Edited By: |

Updated on:Oct 14, 2022 | 12:02 PM

Share

ನವದೆಹಲಿ: ಮಾಸ್ಕೋದಿಂದ ದೆಹಲಿಗೆ (Moscow- Delhi Flight) ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್​ ಇಟ್ಟಿರುವುದಾಗಿ (Bomb Threat) ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

ವಿಮಾನದಲ್ಲಿ ಬಾಂಬ್​ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್​ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆದರೆ, ವಿಮಾನದಲ್ಲಿ ಯಾವುದೇ ರೀತಿಯ ಬಾಂಬ್​ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

“ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು. ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 14 October 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್