Breaking News: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನ.9ರಂದು ಅಧಿಕಾರ ಸ್ವೀಕಾರ

| Updated By: ಅಕ್ಷಯ್​ ಪಲ್ಲಮಜಲು​​

Updated on: Oct 17, 2022 | 7:56 PM

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

Breaking News: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನ.9ರಂದು ಅಧಿಕಾರ ಸ್ವೀಕಾರ
Chief Justice of India. DY Chandrachud
Follow us on

ದೆಹಲಿ: ದೆಹಲಿ: ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ. ನವೆಂಬರ್ 8 ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಶಿಫಾರಸು ಮಾಡಿದ್ದಾರೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಸುಪ್ರೀಂಕೋರ್ಟ್​ನ ನೂತನ ಮುಖ್ಯ ನ್ಯಾಯಮೂರ್ತಿಯಾನ್ನಾಗಿ ಶಿಫಾರಸು ಮಾಡಲಾಗಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು 50 ನೇ ಸಿಜೆಐ ಆಗಿ ಕೇಂದ್ರಕ್ಕೆ ಕಳುಹಿಸಿದ್ದರು. ಇದೀಗ ಅವರು ನ.9ರಂದು ಅಧಿಕಾರ ಸ್ವೀಕರ ಮಾಡಲಿದ್ದಾರೆ.

ಇದನ್ನು ಓದಿ: DY Chandrachud: ನ್ಯಾ. ಡಿವೈ ಚಂದ್ರಚೂಡ್​ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ: ಶಿಫಾರಸು ಮಾಡಿದ ನ್ಯಾ. ಯುಯು ಲಲಿತ್

ಈ ಹಿಂದೆ ಕಾನೂನು ಮತ್ತು ನ್ಯಾಯ ಸಚಿವಾಲಯವು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರಿಗೆ ಪತ್ರ ಬರೆದು ಹೊಸ ಸಿಜೆಐ ಹೆಸರನ್ನು ಶಿಫಾರಸು ಮಾಡಿ ನೇಮಕಾತಿಗೆ ಸಂಬಂಧಿಸಿದ ಜ್ಞಾಪಕ ಪತ್ರ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿತ್ತು ಎಂಬುವುದು ಉಲ್ಲೇಖನೀಯ.

ಈ ಮೂಲಕ ಇಂದು ಮುಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ. 9ರಂದು ಅಧಿಕಾರ ಸ್ವೀಕರ ಮಾಡಲಿದ್ದಾರ ಎಂದು ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

 

 

Published On - 7:28 pm, Mon, 17 October 22