Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 28, 2022 | 1:33 PM

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು.

Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಕೇಂದ್ರದ ಮೂಲಗಳು ತಿಳಿಸಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ಇಂದು ತಿಳಿಸಿವೆ. ಇಂದಿನಿಂದ ಈ ಕುರಿತು ವಿವರವಾದ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದರಿಂದ ರಾಷ್ಟ್ರೀಯ ಖಜಾನೆಗೆ 45,000 ಕೋಟಿ ರೂ ಹೊರೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

 

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:26 pm, Wed, 28 September 22