AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ವಯನಾಡ್​​ನಲ್ಲಿ ರಾಹುಲ್​​ ಗಾಂಧಿಯ ಕಾಂಗ್ರೆಸ್ ಕಚೇರಿ ಧ್ವಂಸಗೊಳಿಸಿದ ಎಸ್​ಎಫ್​ಐ ಕಾರ್ಯಕರ್ತರು, 8 ಮಂದಿ ವಶಕ್ಕೆ

ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿ ಗೋಡೆಯ ಮೇಲೆ ಹತ್ತಿ ಎಸ್‌ಎಫ್‌ಐ ಧ್ವಜ ಹಿಡಿದು ಕಚೇರಿಯನ್ನು  ಧ್ವಂಸಗೊಳಿಸಿದ್ದಾರೆ.

Breaking: ವಯನಾಡ್​​ನಲ್ಲಿ ರಾಹುಲ್​​ ಗಾಂಧಿಯ ಕಾಂಗ್ರೆಸ್ ಕಚೇರಿ ಧ್ವಂಸಗೊಳಿಸಿದ ಎಸ್​ಎಫ್​ಐ ಕಾರ್ಯಕರ್ತರು, 8 ಮಂದಿ ವಶಕ್ಕೆ
ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 24, 2022 | 6:38 PM

Share

ಕೇರಳ:ಕೇರಳದ ಆಡಳಿತಾ ರೂಢ ಸಿಪಿಎಂನ (CPM) ವಿದ್ಯಾರ್ಥಿ ಘಟಕವಾದ ಎಸ್​​ಎಫ್ಐ (SFI) ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ವಯನಾಡ್ (Wayanad) ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಸುಮಾರು 100ರಷ್ಟು ಎಸ್ಎಫ್ಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿದ್ದು ಕಚೇರಿಗೆ ನುಗ್ಗಿ ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 80-100 ಕಾರ್ಯಕರ್ತರಿದ್ದರು. ಇಲ್ಲಿವರೆಗೆ ಎಂಟು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿನ ಅರಣ್ಯಗಳ ಸುತ್ತ ಬಫರ್ ವಲಯಗಳನ್ನು ರಚಿಸುವ ವಿಷಯದಲ್ಲಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ.  ಸಂಸದರ ಕಚೇರಿಯೊಳಗೆ ಪ್ರತಿಭಟನಾಕಾರರ ಗುಂಪು ದಾಂಧಲೆ ನಡೆಸುತ್ತಿರುವ ದೃಶ್ಯಗಳನ್ನು ಮಾಧ್ಯಮಗಳು ಪ್ರಸಾರ ಮಾಡಿವೆ. ಪ್ರತಿಪಕ್ಷದ ನಾಯಕ ವಿ ಡಿ ಸತೀಶನ್ ಘಟನೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ಈ ದಾಳಿ ಕಾನೂನುಬಾಹಿರ ಮತ್ತು “ಗೂಂಡಾಗಿರಿ”ಯನ್ನು ತೋರಿಸುತ್ತದೆ ಎಂದಿದ್ದಾರೆ.

“ವಯನಾಡ್‌ನಲ್ಲಿರುವ ರಾಹುಲ್ ಗಾಂಧಿಯವರ ಕಚೇರಿಯಲ್ಲಿ ಎಸ್‌ಎಫ್‌ಐ ಗೂಂಡಾಗಳಿಂದ ಭೀಕರ ದಾಳಿ. ಇದು ಕಾನೂನುಬಾಹಿರ ಮತ್ತು ಗೂಂಡಾಗಿರಿ. ಸಿಪಿಎಂ ಸಂಘಟಿತ ಮಾಫಿಯಾವಾಗಿ ಮಾರ್ಪಟ್ಟಿದೆ. ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಇಂದು ಸಂಜೆ 3ಗಂಟೆಯ ಹೊತ್ತಿಗೆ ಎಸ್ಎಫ್ಐ ಕಾರ್ಯಕರ್ತರ ಗುಂಪೊಂದು ವಯನಾಡ್ ಸಂಸದ ರಾಹುಲ್ ಗಾಂಧಿಯವರ ಕಚೇರಿಗೆ ಬಲವಂತವಾಗಿ ನುಗ್ಗಿದೆ. ಅಲ್ಲಿದ್ದ ಕಚೇರಿ ನೌಕರರ ಮೇಲೆ ಹಲ್ಲೆ ಮಾಡಿದೆ. ನಮಗೆ ಕಾರಣ ಏನು ಎಂಬುದು ಗೊತ್ತಿಲ್ಲ ಎಂದು ಕಾಂಗ್ರೆಸ್ ನಾಯ ಕೆ.ಸಿ. ವೇಣುಗೋಪಾಲ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.  ಎಸ್ಎಫ್ಐ ಈ ದಾಂಧಲೆ ನಡೆಸುತ್ತಿರುವಾಗ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.

ಇದು ಪೊಲೀಸರ ಕಣ್ಮುಂದೆಯೇ ನಡೆದಿದೆ. ಸಿಪಿಎಂ ನಾಯಕತ್ವದ ಸಂಚು ಇದು ಎಂಬುದು ಸ್ಪಷ್ಟ. ಕಳೆದ ಐದುದಿನಗಳಿಂದ ರಾಹುಲ್ ಅವರನ್ನು ಇಡಿ ವಿಚಾರಣೆ ಮಾಡಿದೆ.ಹೀಗಿರುವಾಗ ಕೇರಳದ ಸಿಪಿಎಂ ರಾಹುಲ್ ಮೇಲೆ ದಾಳಿ ನಡೆಸಲು ನರೇಂದ್ರ ಮೋದಿಯವರ ದಾರಿಯಲ್ಲೇ ಹೋಗುತ್ತಿರುವುದು ಯಾಕೆ ಎಂದು ಗೊತ್ತಾಗುತ್ತಿಲ್ಲ. ಸೀತಾರಾಂ ಯೆಚೂರಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ ಅಂದಿದ್ದಾರೆ ಅವರು.

Published On - 6:09 pm, Fri, 24 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ