ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಹರ್ಯಾಣ ಸಿಎಂ ಮನೋಹರ್​ಲಾಲ್ ಖಟ್ಟರ್ ಆದೇಶ

ಸರ್ಕಾರಿ ಉದ್ಯೋಗ ಕೊಡಿಸುತ್ತೇನೆ ಎಂದು ವ್ಯಕ್ತಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶಿಸಿದ್ದಾರೆ.

ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಹರ್ಯಾಣ ಸಿಎಂ ಮನೋಹರ್​ಲಾಲ್ ಖಟ್ಟರ್ ಆದೇಶ
Manohar Lal Khattar
Follow us
TV9 Web
| Updated By: ನಯನಾ ರಾಜೀವ್

Updated on: Sep 12, 2022 | 10:11 AM

ಸರ್ಕಾರಿ ಉದ್ಯೋಗ ಕೊಡಿಸುತ್ತೇನೆ ಎಂದು ವ್ಯಕ್ತಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶಿಸಿದ್ದಾರೆ. ಭಾನುವಾರ ಗುರುಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಜಿಲ್ಲಾ ಪರಿಷತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಾರ್ವಜನಿಕ ಸಂಪರ್ಕ ಮತ್ತು ಕುಂದುಕೊರತೆ ಪರಿಹಾರ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರೋಪಿಯ ವಂಚನೆಯ ಇತಿಹಾಸ ಕೇಂದ್ರದಲ್ಲಿ ಗ್ರೂಪ್-ಡಿ ಹುದ್ದೆಗಳಿಗೆ ಲಂಚ ಪಡೆಯುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಅವರು ಲಂಚ ಕೊಟ್ಟು ಯಾವುದೇ ವ್ಯಕ್ತಿಯೂ ಕೆಲಸ ಪಡೆಯದಂತಹ ವ್ಯವಸ್ಥೆಯನ್ನು ರಾಜ್ಯದಲ್ಲಿ ರೂಪಿಸಿದ್ದೇವೆ.

ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಜನರಿಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ. ಈ ಪ್ರಕರಣದ ಆರೋಪಿಯು ಈ ಹಿಂದೆಯೂ ವಂಚನೆ ಮಾಡಿರುವ ಇತಿಹಾಸವನ್ನು ಹೊಂದಿದ್ದು, ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಸೊಹ್ನಾ ಪೊಲೀಸ್ ಠಾಣೆಯು ಪ್ರಕರಣವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ್ದರು ಮತ್ತು ದೂರುದಾರ ಮತ್ತು ಆರೋಪಿಗಳ ನಡುವೆ ಹಣದ ವ್ಯವಹಾರ ನಡೆದಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ.

ಪೊಲೀಸ್ ಕಮಿಷನರ್, ಗುರುಗ್ರಾಮದಲ್ಲಿ ನೇಮಕಗೊಂಡ ಡೆಪ್ಯೂಟಿ ಡಿಸ್ಟ್ರಿಕ್ಟ್ ಅಟಾರ್ನಿ, ಇದು ಪ್ರಾಥಮಿಕವಾಗಿ ಎರಡು ಪಕ್ಷಗಳ ನಡುವಿನ ವಿಷಯ ಎಂದು ಪರಿಗಣಿಸಿದ್ದರು. ಗುರುಗ್ರಾಮದ ಪೊಲೀಸರು ಸೋಹ್ನಾ ನಿವಾಸಿ ಅನಿಲ್ ಕುಮಾರ್ ಅವರ ದೂರನ್ನು ನಿರ್ವಹಿಸುವಲ್ಲಿ ಸಬ್ ಇನ್ಸ್‌ಪೆಕ್ಟರ್ ಸತೀಂದರ್ ತೀವ್ರ ನಿರ್ಲಕ್ಷ್ಯವನ್ನು ತೋರಿಸಿದ್ದಾರೆ ಎಂದು ಹೇಳಿದರು.

ಆದ್ದರಿಂದ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ, ಹಾಗೂ ಸೋಹ್ನಾದಲ್ಲಿರುವ ಪಿಎಂ ಕಚೇರಿಯಲ್ಲಿ ಉದ್ಯೋಗ ನೀಡುವ ಹೆಸರಿನಲ್ಲಿ ವಂಚಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ