ಅಫ್ಘಾನಿಸ್ತಾನ ಅಕ್ಕಪಕ್ಕದ ದೇಶಗಳಿಗೆ ಆತಂಕ ತರಬಾರದು: ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ದಕ್ಷಿಣ ಆಫ್ರಿಕ ಅಧ್ಯಕ್ಷ ಸಿರಿಲ್ ರಾಮಫೋಸಾ, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಅಫ್ಘಾನಿಸ್ತಾನ ಅಕ್ಕಪಕ್ಕದ ದೇಶಗಳಿಗೆ ಆತಂಕ ತರಬಾರದು: ಬ್ರಿಕ್ಸ್​ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ
ಬ್ರಿಕ್ಸ್​ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 09, 2021 | 6:55 PM

ದೆಹಲಿ: ಜಾಗತಿಕ ವಿದ್ಯಮಾನದಲ್ಲಿ ಮಹತ್ವ ಪಡೆದಿರುವ ಬ್ರಿಕ್ಸ್​ ಶೃಂಗಸಭೆಯು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಿತು. ಬ್ರಿಕ್ಸ್ ಸದಸ್ಯ ರಾಷ್ಟ್ರಗಳಾಗಿರುವ ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾದ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಯಿಂದ ಅಫ್ಘಾನಿಸ್ತಾನವು ಅಕ್ಕಪಕ್ಕದ ದೇಶಗಳಿಗೆ ಬೆದರಿಕೆಯಾಗಬಾರದು. ಹಲವು ದಶಕಗಳಿಂದ ಹೋರಾಡಿರುವ ಅಫ್ಘಾನಿಸ್ತಾನದ ಪ್ರಜೆಗಳಿಗೆ ತಮ್ಮ ಆಶಯಕ್ಕೆ ತಕ್ಕಂತೆ ಸರ್ಕಾರ ರಚಿಸಿಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದರು.

ಕಳೆದ 13 ವರ್ಷಗಳಲ್ಲಿ ಬ್ರಿಕ್ಸ್​ ಮಾಡಿರುವ ಹಲವು ಸಾಧನೆಗಳನ್ನು ಪ್ರಸ್ತಾಪಿಸಿದರು. ಪ್ರಗತಿಶೀಲ ಆರ್ಥಿಕತೆಯ ಪ್ರಭಾವಿ ಧ್ವನಿಗಳಾಗಿರುವ ನಾವು ಅಭಿವೃದ್ಧಿಶೀಲ ದೇಶಗಳಿಗಾಗಿ ವೇದಿಕೆಯೊಂದನ್ನು ರೂಪಿಸಿದ್ದೇವೆ ಎಂದು ಹೇಳಿದರು.

ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್​ ಇನ್ನಷ್ಟು ಪ್ರಭಾವಿಯಾಗುವಂತೆ ಮಾಡಲು ನಾವೆಲ್ಲರೂ ಗಮನಹರಿಸಬೇಕು. ಬ್ರಿಕ್ಸ್​ನ ಅಧ್ಯಕ್ಷತೆಯ ಗೌರವಕ್ಕೆ ಪಾತ್ರವಾಗಿರುವ ಭಾರತವು ಸತತ ಪ್ರಗತಿ, ಸಹಯೋಗ ಮತ್ತು ಸಹಮತದ ಆಶಯವನ್ನು ಮುಂದಿಟ್ಟಿದೆ ಎಂದು ಮೋದಿ ನುಡಿದರು.

ಮೊದಲ ಬ್ರಿಕ್ಸ್​ ಡಿಜಿಟಲ್ ಆರೋಗ್ಯ ಸಮಾವೇಶ ಈಚೆಗಷ್ಟೇ ನಡೆಯಿತು. ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಸದುಪಯೋಗದ ಬಗ್ಗೆ ಈ ಸಮಾವೇಶದಲ್ಲಿ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಳ್ಳಲಾಯಿತು. ನಮ್ಮ ದೇಶಗಳ ನೀರಾವರಿ ಸಚಿವರು ಇದೇ ಮಾದರಿಯಲ್ಲಿ ಮುಂದಿನ ನವೆಂಬರ್​ನಲ್ಲಿ ಪರಸ್ಪರ ಸಂವಾದ ನಡೆಸಲಿದ್ದಾರೆ ಎಂದು ಘೋಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಿಕ್ಸ್​ ಶೃಂಗಸಭೆ ಅಧ್ಯಕ್ಷತೆಯ ಗೌರವ 2ನೇ ಬಾರಿಗೆ ಒಲಿದಿದೆ. 2016ರಲ್ಲಿ ಗೋವಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ ಅಧ್ಯಕ್ಷತೆ ವಹಿಸಿದ್ದರು.

ಅಫ್ಘಾನ್ ಗೊಂದಲ: ಅಮೆರಿಕ ವಿರುದ್ಧ ರಷ್ಯಾ ಆರೋಪ ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಕಾಣಿಸಿಕೊಂಡಿರುವ ಅಪಾಯಕಾರಿ ಪರಿಸ್ಥಿತಿಯು ಅಕ್ಕಪಕ್ಕದ ದೇಶಗಳಿಗೆ ಅಪಾಯಕಾರಿ ಆಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತಮ್ಮ ಭಾಷಣದಲ್ಲಿ ಹೇಳಿದರು. ಅಫ್ಘಾನಿಸ್ತಾನದ ಸದ್ಯದ ಬೆಳವಣಿಗೆಗೆ ಅಮೆರಿಕ ಸರ್ಕಾರವು ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿದ್ದೇ ಕಾರಣ ಎಂದು ಅವರು ನೇರ ಆರೋಪ ಮಾಡಿದರು. ಅಫ್ಘಾನಿಸ್ತಾನವು ಮತ್ತೊಮ್ಮೆ ಭಯೋತ್ಪಾದಕರ ಸ್ವರ್ಗ ಆಗುವುದು ಬೇಡ. ಅಫ್ಘಾನಿಸ್ತಾನದ ಆಂತರಿಕ ವಿಚಾರದಲ್ಲಿ ಇತರ ದೇಶಗಳ ಹಸ್ತಕ್ಷೇಪ ಸಲ್ಲದು ಎಂದು ಅವರು ಹೇಳಿದರು.

ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಫ್ಘಾನ್ ಬೆಳವಣಿಗೆಗಳು ಪ್ರಾದೇಶಿಕ ಮತ್ತು ಜಾಗತಿಕ ಭದ್ರತೆಯ ಮೇಲೆ ಉಂಟು ಮಾಡಬಹುದಾದ ಪರಿಣಾಮಗಳ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ರಷ್ಯಾ ಮತ್ತು ಇತರ ಬ್ರಿಕ್ಸ್​ ಸದಸ್ಯ ರಾಷ್ಟ್ರಗಳು ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ, ಸಾಕಷ್ಟು ಸಲ ಮಾತನಾಡಿವೆ ಎಂದು ನುಡಿದರು.

ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ದಕ್ಷಿಣ ಆಫ್ರಿಕ ಅಧ್ಯಕ್ಷ ಸಿರಿಲ್ ರಾಮಫೋಸಾ, ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.

(BRICS Summit Narendra Modi Stress on Cooperation Between Nations)

ಇದನ್ನೂ ಓದಿ: ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ: ಪ್ರಧಾನಿ ಮೋದಿ

ಇದನ್ನೂ ಓದಿ: ಪ್ರಧಾನಿ ಮೋದಿ ನಿವಾಸದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು

Published On - 6:17 pm, Thu, 9 September 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು