IED Blast: ಮಣಿಪುರ, ನಾಗಾಲ್ಯಾಂಡ್​ ಸಂಪರ್ಕಿಸುವ ಸೇತುವೆ ಮೇಲೆ ಐಇಡಿ ಸ್ಫೋಟ

ಇಂಫಾಲ್ ಮತ್ತು ಮಣಿಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಐಇಡಿ ಸ್ಫೋಟಗೊಂಡು ಸೇತುವೆಗೆ ಹಾನಿಯಾಗಿದೆ. ಸೇತುವೆಯ ಮೇಲೆ ವಾಹನಗಳ ನಿರ್ಬಂಧ ಹೇರಲಾಗಿದೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

IED Blast: ಮಣಿಪುರ, ನಾಗಾಲ್ಯಾಂಡ್​ ಸಂಪರ್ಕಿಸುವ ಸೇತುವೆ ಮೇಲೆ ಐಇಡಿ ಸ್ಫೋಟ
ಐಇಡಿ ಸ್ಫೋಟ
Follow us
ನಯನಾ ರಾಜೀವ್
|

Updated on:Apr 24, 2024 | 11:28 AM

ಮಣಿಪುರ(Manipur)ದ ಇಂಫಾಲ್ ಮತ್ತು ನಾಗಾಲ್ಯಾಂಡ್‌ನ ದಿಮಾಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡಿದೆ. ಸೇತುವೆಯು ರಾಷ್ಟ್ರೀಯ ಹೆದ್ದಾರಿ 2 ರಲ್ಲಿದೆ ಮತ್ತು ಮಣಿಪುರದ ಕುಬ್ರುದಲ್ಲಿದೆ ಲಿಖಾ ಸಪರ್ಮಿನಾ ಗ್ರಾಮಗಳು ಮತ್ತು ಕಾಂಗ್ಪೋಕ್ಪಿ ಜಿಲ್ಲೆಯ ಮೂಲಕ ಹಾದುಹೋಗಲಿದೆ.

ಮಂಗಳವಾರ ಮಧ್ಯರಾತ್ರಿ 12.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಸ್ಫೋಟದ ಪರಿಣಾಮವಾಗಿ ಸೇತುವೆಯ ಮಧ್ಯದಲ್ಲಿ ಮೂರು ಕುಳಿಗಳು, ಎರಡೂ ತುದಿಗಳಲ್ಲಿ ಬಿರುಕುಗಳು ಉಂಟಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಇದೇ ವೇಳೆ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಕಳೆದ ವರ್ಷವೂ ಇಂಥದ್ದೇ ಘಟನೆ ನಡೆದಿತ್ತು ಕಳೆದ ವರ್ಷ ಜೂನ್‌ನಲ್ಲಿ ಮಣಿಪುರದಲ್ಲಿ ಮೂವರು ಗಾಯಗೊಂಡಿದ್ದ ಐಇಡಿ ಸ್ಫೋಟದಲ್ಲಿ ಪ್ರಮುಖ ಸಂಚುಕೋರ ಸೇರಿದಂತೆ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಪಟ್ಟಿ ಸಲ್ಲಿಸಿದೆ.

ಬಿಷ್ಣುಪುರ ಜಿಲ್ಲೆಯ ಕ್ವಾಕ್ಟಾದಲ್ಲಿ ವಾಹನದೊಳಗೆ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯಾಗಿತ್ತು.

ಮತ್ತಷ್ಟು ಓದಿ: ಛತ್ತೀಸ್​ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ

ಆರೋಪಿಗಳನ್ನು ಸೆಮಿನ್ಲುನ್ ಗಂಗ್ಟೆ ಅಲಿಯಾಸ್ ಮಿನ್ಲುನ್ ಮತ್ತು ಮೊಹಮ್ಮದ್ ನೂರ್ ಹುಸೇನ್ ಅಲಿಯಾಸ್ ಟೊಂಬಾ ಅಲಿಯಾಸ್ ಮೊಹಮ್ಮದ್ ನೂರ್ ಹಸನ್ ಎಂದು ಗುರುತಿಸಲಾಗಿತ್ತು. ಆದರೆ ಈಗ ನಡೆದಿರುವ ಐಇಡಿ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:22 am, Wed, 24 April 24

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?