ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ನನ್ನ ಮಗಳನ್ನು ಭಾರತಕ್ಕೆ ಕರೆದುಕೊಂಡು ಬನ್ನಿ: ಎಸ್ ಜೈಶಂಕರ್​ಗೆ ಪತ್ರ ಬರೆದ ತಾಯಿ ​

ಭಾರತದ ಮೂಲದ ಮಹಿಳೆ ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿದ್ದು, ಚಿಕಾಗೋ ಬೀದಿಗಳಲ್ಲಿ ಸುತ್ತಾಡುತ್ತಿದ್ದಾರೆ. ಮಗಳನ್ನು ಮತ್ತೆ ಭಾರತಕ್ಕೆ ಕರೆದುಕೊಂಡು ಬರುವ ವ್ಯವಸ್ಥೆಯನ್ನು ಮಾಡುವಂತೆ ಆಕೆಯ ತಾಯಿ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ನನ್ನ ಮಗಳನ್ನು ಭಾರತಕ್ಕೆ ಕರೆದುಕೊಂಡು ಬನ್ನಿ: ಎಸ್ ಜೈಶಂಕರ್​ಗೆ ಪತ್ರ ಬರೆದ ತಾಯಿ ​
ಸೈಯದಾ ಲುಲು ಮಿನ್ಹಾಜ್ ಜೈದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 26, 2023 | 6:03 PM

ದೆಹಲಿ,ಜು.26: ಭಾರತ ಮೂಲದ ಮಹಿಳೆಯೊಬ್ಬರು ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆಕೆಯನ್ನು ಮತ್ತೆ ಭಾರತಕ್ಕೆ ಕರೆದುಕೊಂಡು ಬರುವಂತೆ ಆಕೆಯ ತಾಯಿ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ. ಯುಎಸ್​​ಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ತೆರಳಿದ್ದ ಈ ಮಹಿಳೆಯ ಕೈಯಲ್ಲಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದೆ. ಇದೀಗ ಆ ಮಹಿಳೆಗೆ ಊಟಕ್ಕೆ ಹಣವಿಲ್ಲದೆ ಹಸಿವಿನಿಂದ ಬಳಲುತ್ತಿದ್ದಾರೆ. ಮಹಿಳೆ ಖಿನ್ನತೆ ಒಳಲಾಗಿದ್ದು ಚಿಕಾಗೋದ ರಸ್ತೆಗಳಲ್ಲಿ ತಿರುಗಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಈ 35 ವರ್ಷದ ಮಹಿಳೆಯನ್ನು ಹೈದರಾಬಾದ್ ಮೂಲದ ಸೈಯದಾ ಲುಲು ಮಿನ್ಹಾಜ್ ಜೈದಿ ಎಂದು ಗುರುತಿಸಲಾಗಿದೆ. ಮಗಳ ಸ್ಥಿತಿಯನ್ನು ಕಂಡು ಹೈದರಾಬಾದ್​​ನಲ್ಲಿರುವ ಆಕೆಯ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು ಬರುವಂತೆ ದೇಶ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ತಾಯಿ ಸೈಯದಾ ವಹಾಜ್ ಫಾತಿಮಾ ಅವರು ಬರೆದಿರುವ ಪತ್ರದಲ್ಲಿ ಹೀಗೆ ತಿಳಿಸಿದ್ದಾರೆ. ನನ್ನ ಮಗಳು ಸೈಯದಾ ಲುಲು ಮಿನ್ಹಾಜ್ ಜೈದಿ, ಡೆಟ್ರಾಯಿಟ್‌ನ ಟ್ರೈನ್ (TRINE) ವಿಶ್ವವಿದ್ಯಾಲಯದಲ್ಲಿ ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು 2022 ಆಗಸ್ಟ್‌ನಲ್ಲಿ ಯುಎಸ್‌ಗೆ ಹೋಗಿದ್ದಳು ಮತ್ತು ಕಳೆದ ಎರಡು ತಿಂಗಳನಿಂದ ಅವಳು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದ ಗ್ಯಾಸ್ ಸ್ಟೇಷನ್​​ನಲ್ಲಿ ಭಾರತೀಯ ವಿದ್ಯಾರ್ಥಿ ಗುಂಡಿಗೆ ಬಲಿ; ಶಂಕಿತ ದಾಳಿಕೋರರ ಫೋಟೊ ಬಿಡುಗಡೆ

ಇತ್ತೀಚೆಗಷ್ಟೇ ಸೈಯದಾ ಲುಲು ಮಿನ್ಹಾಜ್ ಜೈದಿಯನ್ನು ಅಮೆರಿಕದಲ್ಲಿರುವ ಇಬ್ಬರು ಹೈದರಾಬಾದಿ ಯುವಕರು ಆಕೆಯನ್ನು ಗುರುತಿಸಿ ಈಗ ಇರುವ ಸ್ಥಿತಿಯ ಬಗ್ಗೆ ಆಕೆಯ ಕುಟುಂಬಕ್ಕೆ ತಿಳಿಸಿದ್ದಾರೆ. ಇನ್ನೂ ವಿದೇಶಾಂಗ ಸಚಿವ ಎಸ್​​.ಜೈಶಂಕರ್​​ ಅವರಿಗೆ ಬರೆದಿರುವ ಪತ್ರದಲ್ಲಿ “ನನ್ನ ಮಗಳು ತೀವ್ರ ಖಿನ್ನತೆಗೆ ಒಳಗಾಗಿದ್ದಾಳೆ ಮತ್ತು ಆಕೆಯಲ್ಲಿದ್ದ ಹಣ, ಬೆಲೆಬಾಳುವ ವಸ್ತಗಳನ್ನು ಕಳವು ಮಾಡಲಾಗಿದೆ. ಇದರಿಂದಾಗಿ ಅವಳು ಹಸಿವಿನಿಂದ ಒದಾಡುತ್ತಿದ್ದಾಳೆ. ಇದೀಗ USAಯ ಚಿಕಾಗೋದ ರಸ್ತೆಗಳಲ್ಲಿ ಒಬ್ಬಂಟಿಯಾಗಿರುವ ಫೋಟೋವನ್ನು ನಮಗೆ ಕಳುಹಿಸಲಾಗಿದೆ, ಅವಳ ಸ್ಥಿತಿಯನ್ನು ನೋಡಲು ಸಾಧ್ಯವಾಗುತ್ತಿಲ್ಲ​, ದಯವಿಟ್ಟು ಭಾರತದ ರಾಯಭಾರ ಕಚೇರಿಗೆ ಈ ಬಗ್ಗೆ ತಿಳಿಸಿ, ವಾಷಿಂಗ್ಟನ್ ಡಿಸಿ, ಯುಎಸ್‌ಎ ಮತ್ತು ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ತಕ್ಷಣವೇ ಅವಳನ್ನು ಸಂಪರ್ಕ ಮಾಡುವಂತೆ ಹೇಳಿ. ನನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಮಾಡಿ ಎಂದು ತಿಳಿಸಿದ್ದಾರೆ.

ಈ ಪತ್ರವನ್ನು ಬಿಆರ್‌ಎಸ್ ನಾಯಕ ಖಲೀಕುರ್ ರಹಮಾನ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತನ್ನ ಮಗಳನ್ನು ಮನೆಗೆ ಕರೆತರಲು ಸಹಾಯ ಮಾಡುವಂತೆ ಅವರು ಯುಎಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಚಿಕಾಗೋದಲ್ಲಿರುವ ದೂತಾವಾಸವನ್ನು ಕೋರಿದ್ದಾರೆ ಎಂದು ಹೇಳಿದ್ದಾರೆ. ಈ ಪತ್ರ ಮತ್ತು ಆಕೆ ಈಗ ಇರುವ ಸ್ಥಿತಿಯ ಫೋಟೋವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು ಸಚಿವ ಎಸ್​​ ಜೈಶಂಕರ್​ ಅವರಿಗೆ ಟ್ಯಾಗ್​​ ಕೂಡ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ