ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅತಿಥಿ
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮೂಲಕ ಬ್ರಿಟನ್ ಪ್ರಧಾನಿ ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ 2021ರ ಗಣರಾಜ್ಯೋತ್ಸವದ ಅತಿಥಿಯಾಗಿ ಭಾಗವಹಿಸುವುದು ಖಚಿತವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿ, ಬ್ರಿಟನ್ ಪ್ರಧಾನಿ ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.
ಈ ಹಿಂದೆ, 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇಂಗ್ಲೆಂಡ್ ಪ್ರಧಾನಿ ಭಾರತದ ಗಣರಾಜ್ಯೋತ್ಸವ ಪೆರೇಡ್ಗೆ ಅತಿಥಿಯಾಗಿ ಆಗಮಿಸಿದ್ದು 1993ರಲ್ಲೇ ಕೊನೆ. ಬಳಿಕ ಈಗ 27 ವರ್ಷಗಳ ನಂತರ ಬ್ರಿಟನ್ ಪ್ರಧಾನಿಗೆ ಭಾರತದಿಂದ ಆಹ್ವಾನ ನೀಡಲಾಗಿತ್ತು. ಬೋರಿಸ್ ಜಾನ್ಸನ್ ಭಾರತದ ಆಮಂತ್ರಣ ಸ್ವೀಕರಿಸಿದರೆ ಮುಂದಿನ ತಿಂಗಳು ನಡೆಯುವ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿ ಆಗಲಿದ್ದಾರೆ ಎಂದು ಹೇಳಲಾಗಿತ್ತು.
ಈ ಬಗ್ಗೆ ಬಿ.ಎಲ್. ಸಂತೋಷ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಬೋರಿಸ್ ಜಾನ್ಸನ್ 2021ರ ಗಣರಾಜ್ಯೋತ್ಸವದ ಅತಿಥಿಯಾಗಿ ಭಾಗವಹಿಸುವುದನ್ನು ಖಚಿತಪಡಿಸಿದ್ದಾರೆ.
UK PM @BorisJohnson to be the Chief guest at Republic Day parade 2021 . Huge melt down for liberals , anarchists .
— B L Santhosh (@blsanthosh) December 15, 2020
ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರುವಂತೆ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ಗೆ ಆಹ್ವಾನ
Published On - 3:28 pm, Tue, 15 December 20