AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ

SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ.

SpiceJet ಸ್ಪೈಸ್ ಜೆಟ್ ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಬ್ರಿಟಿಷ್ ಏರ್‌ವೇಸ್ ಟ್ರೈನಿ ಬಂಧನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 13, 2023 | 7:02 PM

ಸ್ಪೈಸ್‌ಜೆಟ್ (SpiceJet) ವಿಮಾನಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಕ್ಕಾಗಿ ಬ್ರಿಟಿಷ್ ಏರ್‌ವೇಸ್‌ನ (British Airways) ಟ್ರೈನಿ ಟಿಕೆಟಿಂಗ್ ಏಜೆಂಟ್ ಅನ್ನು ಶುಕ್ರವಾರ ಬಂಧಿಸಲಾಗಿದೆ. SG 8938 (ದೆಹಲಿ-ಪುಣೆ) ವಿಮಾನದಲ್ಲಿ ಕಾರ್ಯನಿರ್ವಹಿಸಲು ನಿಗದಿಯಾಗಿದ್ದ ವಿಮಾನದಲ್ಲಿ ಬಾಂಬ್ ಇರುವ ಕುರಿತು ಸ್ಪೈಸ್‌ಜೆಟ್ ಕಾಯ್ದಿರಿಸುವಿಕೆ ಕಚೇರಿಗೆ ಗುರುವಾರ ಕರೆ ಬಂದಿತ್ತು. ಆ ಸಮಯದಲ್ಲಿ, ವಿಮಾನಕ್ಕಾಗಿ ಪ್ರಯಾಣಿಕರ ಬೋರ್ಡಿಂಗ್ ಪ್ರಾರಂಭವಾಗಿರಲಿಲ್ಲ ಎಂದು ವಿಮಾನಯಾನ ವಕ್ತಾರರು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರೆಯನ್ನು ಅನುಸರಿಸಿ, ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಸ್ಥಳಾಂತರಿಸಲಾಗಿದ್ದು ಭದ್ರತಾ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದರು. “ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಸುಳ್ಳು ಎಂದು ಘೋಷಿಸಲಾಯಿತು” ಎಂದು ವಕ್ತಾರರು ತಿಳಿಸಿದ್ದಾರೆ.

ನಿನ್ನೆ ಕರೆ ಸ್ವೀಕರಿಸಿದ ನಂತರ, ವಿಮಾನಯಾನ ಸಂಸ್ಥೆಗಳು ನಿರ್ಗಮನವನ್ನು ಸ್ಥಗಿತಗೊಳಿಸಿ ಸಂಪೂರ್ಣ ಹುಡುಕಾಟ ನಡೆಸಿದ್ದವು.ಆದರೆ ಅಧಿಕಾರಿಗಳು ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾಗಿ ಕಂಡುಬಂದಿಲ್ಲ. “ಭದ್ರತಾ ಅಧಿಕಾರಿಗಳು ಅದನ್ನು ಕೂಲಂಕಷವಾಗಿ ಪರಿಶೀಲಿಸಿದರು ಮತ್ತು ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ. ನಂತರ ಕರೆಯನ್ನು ಹುಸಿ ಬಾಂಬ್ ಕರೆ ಎಂದು ಘೋಷಿಸಲಾಯಿತು” ಎಂದು ಸ್ಪೈಸ್ ಜೆಟ್ ವಕ್ತಾರರು ತಿಳಿಸಿದ್ದಾರೆ.

ಕರೆ ಮಾಡಿದವರ ಪತ್ತೆಗೆ ದೆಹಲಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಬ್ರಿಟಿಷ್ ಏರ್‌ವೇಸ್ ಟಿಕೆಟಿಂಗ್ ಕೌಂಟರ್‌ನಲ್ಲಿ ತರಬೇತಿ ಪಡೆಯುತ್ತಿರುವ 24 ವರ್ಷದ ಅಭಿನವ್ ಪ್ರಕಾಶ್ ಈ ಕರೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಪುಣೆಗೆ ವಿಮಾನ ಪ್ರಯಾಣ ಬೆಳೆಸುತ್ತಿದ್ದ ತನ್ನ ಸ್ನೇಹಿತ ಆತನ ಗೆಳತಿಯೊಂದಿಗೆ ಸ್ವಲ್ಪ ಸಮಯ ಕಳೆಯಲು ತಾನು ಕರೆ ಮಾಡಿದ್ದೇನೆ ಎಂದು ಪ್ರಕಾಶ್ ಬಹಿರಂಗಪಡಿಸಿದ್ದಾರೆ.

ದೆಹಲಿ-ಪುಣೆ ಸ್ಪೈಸ್ ಜೆಟ್ ನಿನ್ನೆ ಸಂಜೆ 6.30ಕ್ಕೆ ಐಜಿಐ ವಿಮಾನ ನಿಲ್ದಾಣದಿಂದ ಹೊರಡಬೇಕಿತ್ತು. ಟೇಕಾಫ್ ಆಗುವ ಕೆಲವೇ ನಿಮಿಷಗಳ ಮೊದಲು, ಸ್ಪೈಸ್ ಜೆಟ್ ರಿಸರ್ವೇಶನ್ ಕಚೇರಿಗೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Fri, 13 January 23

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ