ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ
ಕೆ ಕವಿತಾ
Image Credit source: NDTV

Updated on: Apr 08, 2024 | 10:53 AM

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.

ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ತನ್ನ ಮೊಬೈಲ್‌ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.

ಮತ್ತಷ್ಟು ಓದಿ: ‘ಕೆ ಕವಿತಾ ಎಎಪಿ ನಾಯಕರಿಗೆ ₹100 ಕೋಟಿ ಕೊಟ್ಟಿದ್ದಾರೆ’: ಜಾರಿ ನಿರ್ದೇಶನಾಲಯ

ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಇಡಿ ವಕೀಲರು ಪ್ರತಿಪಾದಿಸಿದ್ದಾರೆ.

ಕವಿತಾ ಅವರ ಮಗನ 12 ಪರೀಕ್ಷೆಗಳಲ್ಲಿ 7 ಪರೀಕ್ಷೆಗಳು ಈಗಾಗಲೇ ಮುಗಿದಿವೆ ಎಂದು ಹೇಳಿದರು. ಅವನು ಒಬ್ಬಂಟಿಯಲ್ಲ, ಏಕೆಂದರೆ ಅವನ ತಂದೆ ಮತ್ತು ಅಣ್ಣ ಸಹ ಅವನೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Mon, 8 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us