AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ಎಲ್ಲರೆದುರೇ ವಿದ್ಯಾರ್ಥಿನಿ ಮೈಮೇಲೆ ಕುಳಿತು ಕತ್ತು ಸೀಳಿದ ಯುವಕ

ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಭಯಾನಕ ಘಟನೆ ನಡೆದಿದೆ. ಅಭಿಷೇಕ್ ಎಂಬಾತ ವಿದ್ಯಾರ್ಥಿನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಲ್ಲಿದ್ದ ಜನರು ಏನೂ ಮಾಡದೆ ನೋಡುತ್ತಲೇ ನಿಂತಿದ್ದರು. ಆಸ್ಪತ್ರೆಯ ನೆಲದ ಮೇಲೆ ರಕ್ತದ ಕೋಡಿಯೇ ಹರಿದಿತ್ತು. ಆದರೆ ಯಾರೂ ಸಹಾಯಕ್ಕೆ ಧಾವಿಸಿರಲಿಲ್ಲ. ರೋಗಿಯನ್ನು ಗುಣಪಡಿಸಬೇಕಿದ್ದ ಜಾಗ ಪ್ರಾಣ ತೆಗೆಯುವ ಕಸಾಯಿಖಾನೆಯಾಗಿ ಮಾರ್ಪಟ್ಟಿತ್ತು

ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ಎಲ್ಲರೆದುರೇ ವಿದ್ಯಾರ್ಥಿನಿ ಮೈಮೇಲೆ ಕುಳಿತು ಕತ್ತು ಸೀಳಿದ ಯುವಕ
ಕ್ರೈಂ
ನಯನಾ ರಾಜೀವ್
|

Updated on: Jul 01, 2025 | 10:05 AM

Share

ಭೋಪಾಲ್, ಜುಲೈ 01: ಆಸ್ಪತ್ರೆಯಲ್ಲಿ ಎಲ್ಲರೆದುರೇ ಯುವಕನೊಬ್ಬ ವಿದ್ಯಾರ್ಥಿನಿ ಮೈಮೇಲೆ ಹತ್ತಿ ಕುಳಿತು ಆಕೆಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಜೂನ್ 27ರಂದು ನರಸಿಂಗ್​​ಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯೊಳಗೆ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಭಿಷೇಕ್ ಕೋಶ್ಟಿ ಎಂಬಾತ ಎಲ್ಲರ ಕಣ್ಣೆದುರೇ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಅಭಿಷೇಕ್ ಕೋಶ್ಟಿ ಬಾಲಕಿಯ ಕತ್ತು ಸೀಳುತ್ತಿರುವುದನ್ನು ತೋರಿಸಲಾಗಿದೆ.

ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಅಲ್ಲಿದ್ದ ಜನರು ಏನೂ ಮಾಡದೆ ನೋಡುತ್ತಲೇ ನಿಂತಿದ್ದರು. ಆಸ್ಪತ್ರೆಯ ನೆಲದ ಮೇಲೆ ರಕ್ತದ ಕೋಡಿಯೇ ಹರಿದಿತ್ತು. ಆದರೆ ಯಾರೂ ಸಹಾಯಕ್ಕೆ ಧಾವಿಸಿರಲಿಲ್ಲ. ರೋಗಿಯನ್ನು ಗುಣಪಡಿಸಬೇಕಿದ್ದ ಜಾಗ ಪ್ರಾ ಕಸಾಯಿಖಾನೆಯಾಗಿ ಮಾರ್ಪಟ್ಟಿತ್ತು.ಕಪ್ಪು ಶರ್ಟ್ ಧರಿಸಿದ ಅಭಿಷೇಕ್, ಸಂಧ್ಯಾಳನ್ನು ಕಪಾಳಮೋಕ್ಷ ಮಾಡಿ, ನೆಲಕ್ಕೆ ಎಸೆದು, ಎದೆಯ ಮೇಲೆ ಕೂತು, ಚಾಕುವಿನಿಂದ ಕುತ್ತಿಗೆ ಕತ್ತರಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಸುಮಾರು 10 ನಿಮಿಷಗಳ ಕಾಲ ಆತ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ.ಆಕೆಯನ್ನು ಕೊಂದ ಬಳಿಕ ತನ್ನ ಕತ್ತನ್ನು ತಾನೇ ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟು ವಿಫಲನಾಗಿದ್ದಾನೆ. ಆಸ್ಪತ್ರೆಯಿಂದ ಪರಾರಿಯಾಗಿ, ಹೊರಗೆ ನಿಲ್ಲಿಸಿದ್ದ ಬೈಕನ್ನು ಸ್ಟಾರ್ಟ್ ಮಾಡಿ, ಓಡಿ ಹೋಗಿದ್ದಾನೆ.

ಇದನ್ನೂ ಓದಿ
Image
3ನೇ ಪತ್ನಿಯ ಕೊಲೆ ಮಾಡಿ ಬಸ್ಸಲ್ಲಿ ಲಗೇಜ್ ಎಂದು‌ ಕಳುಹಿಸಿದ್ದವ ಅರೆಸ್ಟ್
Image
ಹೆತ್ತಕರುಳಿಗೆ ಕೊಳ್ಳಿ ಇಟ್ಟು ಎಸ್ಕೇಪ್ ಆಗಿದ್ದ ಕಟುಕ ಮಗ ಉಡುಪಿಯಲ್ಲಿ ಸಿಕ್ಕ
Image
ಕಲಬುರಗಿ ತ್ರಿಬಲ್ ಮರ್ಡರ್ ಪ್ರಕರಣ: ಮಹಿಳೆ ಶಪಥಕ್ಕಾಗಿ ಬಿತ್ತು‌ 3 ಹೆಣ!
Image
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!

ಕೊಲೆ ನಡೆದ ಸಮಯದಲ್ಲಿ, ಟ್ರಾಮಾ ಸೆಂಟರ್ ಹೊರಗೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಒಳಗೆ, ವೈದ್ಯರು, ದಾದಿಯರು ಮತ್ತು ವಾರ್ಡ್ ಬಾಯ್ಸ್ ಸೇರಿದಂತೆ ಹಲವಾರು ಆಸ್ಪತ್ರೆ ಸಿಬ್ಬಂದಿ ಇದ್ದರು. ಯಾರೂ ಆತನನ್ನು ತಡೆಯಲಿಲ್ಲ.

ಮತ್ತಷ್ಟು ಓದಿ: ಬೆದರಿಕೆ ಹಾಕಿದ್ದಕ್ಕೆ ಪತಿಯನ್ನೇ ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ

ವಾರ್ಡ್‌ನಲ್ಲಿ ದಾಖಲಾಗಿದ್ದ 11 ರೋಗಿಗಳಲ್ಲಿ ಎಂಟು ಮಂದಿ ಅದೇ ದಿನ ಡಿಸ್ಚಾರ್ಜ್ ಆದರು ಮತ್ತು ಉಳಿದವರು ಮರುದಿನ ಬೆಳಗ್ಗೆ ಹೊರಟರು. ವಿದ್ಯಾರ್ಥಿನಿ ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಮನೆಯಿಂದ ಹೊರಟಿದ್ದಳು. ಆಸ್ಪತ್ರೆಯಲ್ಲಿ ಹೆರಿಗೆ ವಾರ್ಡ್​​ನಲ್ಲಿರುವ ಸ್ನೇಹಿತನ ಅತ್ತಿಗೆಯನ್ನು ಭೇಟಿಯಾಗುವುದಾಗಿ ತಿಳಿಸಿ ಹೋಗಿದ್ದಳು.

ಅಭಿಷೇಕ್ ಮಧ್ಯಾಹ್ನದಿಂದ ಆಸ್ಪತ್ರೆಯ ಸುತ್ತಮುತ್ತಲೂ ಓಡಾಡುತ್ತಿದ್ದ. ಬಳಿಕ ಹತ್ಯೆ ಮಾಡಿದ್ದಾನೆ. ಆಕೆಯ ಕುಟುಂಬದವರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ