ಸಂಪುಟ ಪುನಾರಚನೆಯೋ? ನಾಯಕತ್ವ ಬದಲಾವಣೆಯೋ?; ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿ

| Updated By: sandhya thejappa

Updated on: Jul 17, 2021 | 9:24 AM

ದೆಹಲಿ ಬೆಳವಣಿಗೆ ಮೇಲೆ ಹದ್ದಿನ ಕಣ್ಣು ಇಟ್ಟಿರುವ ಬಿಜೆಪಿ ನಾಯಕರು, ಪ್ರತಿ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಪರ, ವಿರೋಧ ಬಣಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಸಂಪುಟ ಪುನಾರಚನೆಯೋ? ನಾಯಕತ್ವ ಬದಲಾವಣೆಯೋ?; ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ದೆಹಲಿ ಭೇಟಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ದೆಹಲಿಗೆ ತೆರಳಿದ್ದು, ದೆಹಲಿ ಭೇಟಿಯ ಎರಡನೇ ದಿನ ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಇಂದು (ಜುಲೈ 17) ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಅಮಿತ್ ಶಾ, ನಡ್ಡಾ ಭೇಟಿಗೆ ಸಮಯವನ್ನು ಕೇಳಿದ್ದಾರೆ. ಇಂದಿನ ಭೇಟಿ ಸಂಪುಟ ಪುನಾರಚನೆಯೋ? ನಾಯಕತ್ವ ಬದಲಾವಣೆಯೋ? ಎಂಬ ಕುತೂಹಲ ಮೂಡಿದ್ದು, ಯಡಿಯೂರಪ್ಪನವರಿಗೆ ಇಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.

ದೆಹಲಿ ಬೆಳವಣಿಗೆ ಮೇಲೆ ಹದ್ದಿನ ಕಣ್ಣು ಇಟ್ಟಿರುವ ಬಿಜೆಪಿ ನಾಯಕರು, ಪ್ರತಿ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಪರ, ವಿರೋಧ ಬಣಗಳಲ್ಲಿ ಕುತೂಹಲ ಹೆಚ್ಚಾಗಿದೆ.

ಭೇಟಿಗೆ ಸಮಯ ನಿಗದಿ
ಇಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾವನ್ನು ಭೇಟಿ ಮಾಡಲಿದ್ದಾರೆ. ದೆಹಲಿಯ ಜೆ.ಪಿ.ನಡ್ಡಾ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿಯಾಗುತ್ತಾರೆ. ಜೊತೆಗೆ 11.30 ಕ್ಕೆ ರಾಜನಾಥ್ ಸಿಂಗ್ ಭೇಟಿಗೆ ಸಮಯ ನಿಗದಿಯಾಗಿದೆ.

ಕೇಂದ್ರದ ನೆರವು ಕೋರಿದ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ

ಪ್ರಧಾನಿ ನರೇಂದ್ರ ಮೋದಿ ಬಳಿ ಕರ್ನಾಟಕದ ಹಲವು ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಯಡಿಯೂರಪ್ಪ

ಮಧ್ಯಪ್ರದೇಶ ಬಾವಿ ದುರಂತ: ಪುಟ್ಟ ಬಾಲಕಿಯ ರಕ್ಷಣಾ ಕಾರ್ಯಾಚರಣೆ ವೇಳೆ  ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ.ಘೋಷಿಸಿದ ಪ್ರಧಾನಿ ಮೋದಿ

(BS Yediyurappa’s second day visit to Delhi was intriguing)