ಪತ್ನಿಯ ಆತ್ಮಹತ್ಯೆ ಸುದ್ದಿ ಕೇಳಿ, ತಲೆಗೆ ಗುಂಡು ಹಾರಿಸಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆ
ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಫೋನ್ನಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದರು, ಬಳಿಕ ಮನೆಗೆ ಹೋಗಿ ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಳು, ಅದರಿಂದ ಮನನೊಂದು ಯೋಧ ಕೂಡ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಬ್ಬರೂ ಎಂಟು ತಿಂಗಳ ಹಿಂದೆ ಮದುವೆಯಾಗಿದ್ದರು, ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಧೀರ್‌ಪುರ ಗ್ರಾಮದ ನಿವಾಸಿ ಅಂಶು ಯಾದವ್ (24) ಮಂಗಳವಾರ ರಾತ್ರಿ ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಸಾವಿನ ಬಗ್ಗೆ ಮಾಹಿತಿ ಪಡೆದಾಗ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಿಯೋಜಿಸಲಾದ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್ ರಾಜೇಂದ್ರ ಯಾದವ್ (28) ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ರಾಜಸ್ಥಾನ: ಹಾಸ್ಟೆಲ್ನ ಮೂರನೇ ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಹರ್ಸೌರಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಾಜೇಶ್ ಮೀನಾ ತಿಳಿಸಿದ್ದಾರೆ.
ರಾಜೇಂದ್ರ ಯಾದವ್ ಅವರ ಪಾರ್ಥಿವ ಶರೀರವನ್ನು ಗುರುವಾರ ಜೈಪುರಕ್ಕೆ ತರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಅಂಶು ಯಾದವ್ ಮತ್ತು ರಾಜೇಂದ್ರ ಯಾದವ್ ಎಂಟು ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.
ಅಪರಾಧ ಪ್ರಕ್ರಿಯಾ ಸಂಹಿತೆಯ ಕಲಂ 176 (ತನಿಖೆ ಪ್ರಕ್ರಿಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಉಪವಿಭಾಗಾಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ