AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಜಸ್ಥಾನದಲ್ಲಿ ಉರಿ ಉರಿ ಬಿಸಿಲು, ಮರಳಿನಲ್ಲಿ ಹಪ್ಪಳ ಹುರಿದ ಬಿಎಸ್​ಎಫ್​ ಯೋಧ

ಗಡಿ ಭದ್ರತಾ ಪಡೆಯ ಯೋಧರೊಬ್ಬರು ರಾಜಸ್ಥಾನದ ಬಿಕಾನೇರ್​ನಲ್ಲಿ ಮರಳಿನ ಮೇಲೆ ಹಪ್ಪಳ ಹುರಿದು ಅಲ್ಲಿ ಬಿಸಿಲು ಯಾವ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

Video: ರಾಜಸ್ಥಾನದಲ್ಲಿ ಉರಿ ಉರಿ ಬಿಸಿಲು, ಮರಳಿನಲ್ಲಿ ಹಪ್ಪಳ ಹುರಿದ ಬಿಎಸ್​ಎಫ್​ ಯೋಧ
ಬಿಎಸ್​ಎಫ್​ ಯೋಧ
ನಯನಾ ರಾಜೀವ್
|

Updated on: May 23, 2024 | 10:15 AM

Share

ಉತ್ತರ ಭಾರತದಲ್ಲಿ ಬಹುತೇಕ ಸ್ಥಳಗಳಲ್ಲಿ ಶಾಖದ ಅಲೆ ಮುಂದುವರೆದಿದೆ. ತಾಪಮಾನ 45 ಡಿಗ್ರಿ ಸೆಲ್ಸಿಯಸ್​ ದಾಟಿದೆ. ರಾಜಸ್ಥಾನವಂತೂ ಮರುಭೂಮಿ ಇರುವುದರಿಂದ ಬೇರೆಲ್ಲಾ ರಾಜ್ಯಗಳಿಗಿಂತ ಹೆಚ್ಚು ಬಿಸಿಲನ್ನು ಕಾಣುತ್ತಿದೆ. ರಾಜಸ್ಥಾನದಲ್ಲಿ ಬಿಎಸ್​ಎಫ್​ ಯೋಧರೊಬ್ಬರು ಮರಳಿನಲ್ಲಿ ಹಪ್ಪಳ ಹುರಿಯುತ್ತಿರುವ ದೃಶ್ಯ ಕಂಡುಬಂದಿದೆ. ಹಪ್ಪಳ ಹುರಿದು ಬಿಸಿಲ ಧಗೆ ಯಾವ ಪ್ರಮಾಣದಲ್ಲಿ ಇದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಬಿಕಾನೇರ್ ತೀವ್ರ ಶಾಖದ ಅಲೆಯಿಂದ ತತ್ತರಿಸುತ್ತಿದೆ ಮತ್ತು ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ದಾಟಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಬುಧವಾರದಂದು ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಅಲ್ವಾರ್, ಭರತ್‌ಪುರ್, ದೌಸಾ, ಧೋಲ್‌ಪುರ್, ಜೈಪುರ್, ಜುಂಜುನು, ಕರೌಲಿ, ಸಿಕರ್, ಬಾರ್ಮರ್, ಬಿಕಾನೇರ್, ಚುರು, ಹನುಮಾನ್‌ಗಢ, ಜೈಸಲ್ಮೇರ್, ಜೋಧ್‌ಪುರ, ನಾಗೌರ್ ಮತ್ತು ಗಂಗಾನಗರದಲ್ಲಿ ತೀವ್ರ ಬಿಸಿಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ದೆಹಲಿ ಮತ್ತು ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಿಗೆ ಶಾಖ ಅಲೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಳಿ, ಇರಲಿ ಬಿಸಿಲಿರಲಿ ನಮ್ಮ ಸೇನೆಯು ಎಂಥಾ ಹವಾಮಾನದಲ್ಲೂ ನಮ್ಮನ್ನು ಸುರಕ್ಷಿತವಾಗಿರಿಸಲು ಕಷ್ಟಪಡುತ್ತಿರುತ್ತಾರಲ್ಲಾ ಅದಕ್ಕೆ ಧನ್ಯವಾದ ಹೇಳಲೇಬೇಕು ಎಂದು ವಿಡಿಯೋ ನೋಡಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

ಇದೆಲ್ಲವೂ ಜಾಗತಿಕ ತಾಪಮಾನ ಏರಿಕೆಯಿಂದಾಗಿ ನಡೆಯುತ್ತಿದೆ, ಇಡೀ ಜಗತ್ತು ಹವಾಮಾನ ಬದಲಾವಣೆಯ ಬಗ್ಗೆ ಗಂಭೀರವಾಗಿ ಯೋಚಿಸಬೇಕಾಗುತ್ತದೆ ಇಲ್ಲದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂದು ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ವಿಡಿಯೋ

ಹವಾಮಾನ ಇಲಾಖೆಯು ಮೇ 25 ರವರೆಗೆ ಈ ರಾಜ್ಯಗಳಲ್ಲಿ ಬಿಸಿಗಾಳಿಯಿಂದ ತೀವ್ರ ಬಿಸಿಗಾಳಿ ಪರಿಸ್ಥಿತಿಗಳಿಗೆ ಮುನ್ಸೂಚನೆ ನೀಡಿದೆ. ರಾಜಸ್ಥಾನದ ಪಶ್ಚಿಮ ವಲಯದ ಗಂಗಾನಗರ, ಬಿಕಾನೇರ್, ಜೈಸಲ್ಮೇರ್, ಬಾರ್ಮರ್​ನಲ್ಲಿ ಸೆಕೆ ಹೆಚ್ಚು. ಈ ಪ್ರದೇಶದಲ್ಲಿರುವ ಯೋಧರಿಗೆ ಸಲಾಮ್​ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು