Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ

ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಎ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಎ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು.

ಪಾಕಿಸ್ತಾನದ ಮೂವರು ಸ್ಮಗ್ಲರ್​​ಗಳನ್ನು ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು; 36 ಕೆಜಿ ಹೆರಾಯಿನ್​ ವಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Feb 06, 2022 | 4:46 PM

ದೆಹಲಿ: ಇಂದು ಜಮ್ಮುವಿನಲ್ಲಿ ಪಾಕಿಸ್ತಾನದ ಮೂವರು ಸ್ಮಗ್ಲರ್​ಗಳನ್ನು (Pakistani Smugglers) ಗಡಿ ಭದ್ರತಾ ಪಡೆ ಯೋಧರು (BSF) ಹೊಡೆದುರುಳಿಸಿದ್ದಾರೆ. ಹಾಗೇ, ಮೃತ ಸ್ಮಗ್ಲರ್​ಗಳಿಂದ 36 ಪ್ಯಾಕೆಟ್​ಗಳಷ್ಟು ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಇವರ ಸಂಬಾ ಅಂತಾರಾಷ್ಟ್ರೀಯ ಗಡಿಯ ಮೂಲಕ ಡ್ರಗ್ಸ್​ನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಿಎಸ್​ಎಫ್​ ತಿಳಿಸಿದೆ. ಪ್ಯಾಕೆಟ್​​ನಲ್ಲಿ ಇರುವುದು ಹೆರಾಯಿನ್​. ಅಂದಾಜು 36 ಕೆಜಿಗಳಷ್ಟನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಬಿಎಸ್​​ಎಫ್​​ನ ಡಿಐಜಿ ಸಂಧು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನು ಶನಿವಾರ ಶ್ರೀನಗರದ ಜಕುರಾ ಎಂಬಲ್ಲಿ ಇಬ್ಬರು ಲಷ್ಕರ್​ ಇ ತೊಯ್ಬಾದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಅಂದಹಾಗೆ, ಇವರಿಬ್ಬರೂ ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​ನಲ್ಲಿ ಸಕ್ರಿಯರಾಗಿದ್ದರು ಎಂದು ಮಾಹಿತಿ ಸಿಕ್ಕಿದೆ. ಜಕುರಾದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ಆ ಪ್ರದೇಶವನ್ನು ಸುತ್ತುವರಿದ್ದರು. ಆದರೆ ಭಯೋತ್ಪಾದಕರು ಮರೆಯಲ್ಲಿ ನಿಂತು ಭದ್ರತಾ ಪಡೆಗಳ ಮೇಲೆ ಗುಂಡಿ ಹಾರಿಸಿದಾಗ, ರಕ್ಷಣಾ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾಗಿ  ಸ್ಥಳೀಯ ಪೊಲೀಸ್ ತಿಳಿಸಿದ್ದಾರೆ. ಮೃತರ ಬಳಿಯಿದ್ದ ಅಪಾರ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಲತಾ ಮಂಗೇಶ್ಕರ್​ ಹಾಡುಗಳು ಔಷಧಿ ಇದ್ದಂತೆ’; ಖ್ಯಾತ ಗಾಯಕಿಗೆ ನುಡಿ ನಮನ ಸಲ್ಲಿಸಿದ ಕೆ. ಕಲ್ಯಾಣ್​

Published On - 9:48 am, Sun, 6 February 22

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ