AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 100 ಜೂನಿಯರ್ ಟೆಲಿಕಾಂ ಅಧಿಕಾರಿ (JTO) ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವೀಧರರು, ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ಜೂನ್ 4 ರಿಂದ ಜುಲೈ 3ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ವೇತನದ ಸಂಪೂರ್ಣ ಮಾಹಿತಿ ಲಭ್ಯವಿದೆ. ಕೂಡಲೇ ಅರ್ಜಿ ಸಲ್ಲಿಸಿ.

BSNL Recruitment 2026: ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ
ಬಿಎಸ್‌ಎನ್‌ಎಲ್‌ ಉದ್ಯೋಗ Image Credit source: Pinterest
ಅಕ್ಷತಾ ವರ್ಕಾಡಿ
|

Updated on:May 29, 2026 | 2:25 PM

Share

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ನೇರ ನೇಮಕಾತಿ (Direct Recruitment) ಯೋಜನೆಯಡಿ ಖಾಲಿ ಇರುವ ಜೂನಿಯರ್ ಟೆಲಿಕಾಂ ಅಧಿಕಾರಿ (JTO – Telecom) ಕೇಡರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಮತ್ತು ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ವೃತ್ತವಾರು ಹಂಚಿಕೆ:

ಈ ನೂತನ ಅಧಿಸೂಚನೆಯ ಅಡಿಯಲ್ಲಿ ದೇಶಾದ್ಯಂತ ಒಟ್ಟು 100 ಜೂನಿಯರ್ ಟೆಲಿಕಾಂ ಅಧಿಕಾರಿ (JTO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವಿವಿಧ ವಲಯಗಳ ಆಧಾರದ ಮೇಲೆ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಭಾರತದಾದ್ಯಂತ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ವಿಸ್ತರಣೆಯ ಭಾಗವಾಗಿ ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಆಯ್ಕೆಯಾಗುವ ವೃತ್ತಿಪರರಿಗೆ ಸಂಸ್ಥೆಯ ತಾಂತ್ರಿಕ ವಿಭಾಗಗಳನ್ನು ಮುನ್ನಡೆಸುವ ಜವಾಬ್ದಾರಿ ಸಿಗಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಸಡಿಲಿಕೆ ವಿವರ:

ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಬಿಇ (B.E) / ಬಿ.ಟೆಕ್ (B.Tech) ಪದವಿ ಮುಗಿಸಿರಬೇಕು ಅಥವಾ ಎಂಎಸ್‌ಸಿ (M.Sc), ಎಂಟೆಕ್ (M.Tech) ಉತ್ತೀರ್ಣರಾಗಿರಬೇಕು. ಇನ್ನು ಅಭ್ಯರ್ಥಿಗಳ ವಯಸ್ಸು ಜುಲೈ 3, 2026 ರ ಅನ್ವಯ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ, ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷಗಳು, ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ವಿಕಲಚೇತನ (PwBD) ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ವಿಧಾನ:

ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜುಲೈ 3, 2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕದ ಭಾಗವಾಗಿ ಸಾಮಾನ್ಯ (General), ಒಬಿಸಿ ಮತ್ತು ಇಡಬ್ಲ್ಯೂಎಸ್ (EWS) ವರ್ಗದ ಅಭ್ಯರ್ಥಿಗಳು 2,000ರೂ. ಪಾವತಿಸಬೇಕಾಗುತ್ತದೆ. ಅದೇ ರೀತಿ ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ರಿಯಾಯಿತಿ ಇದ್ದು, ತಲಾ 1,000ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಲಿಖಿತ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆಯ (Medical Exam) ಆಧಾರದ ಮೇಲೆ ಮಾಡಲಾಗುತ್ತದೆ. ಪ್ರಮುಖವಾಗಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400 ರಿಂದ 40,500 ರೂ. ರ ಶ್ರೇಣಿಯಲ್ಲಿ ಆಕರ್ಷಕ ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಬಿಎಸ್‌ಎನ್‌ಎಲ್ ಜೆಟಿಒ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರ ಈ ಕೆಳಗಿನಂತಿದೆ:

  • ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ: ಜೂನ್ 4, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 3, 2026
  • ಅರ್ಜಿ ಪರಿಷ್ಕರಣೆ (Correction Window) ದಿನಾಂಕ: ಜುಲೈ 4 ರಿಂದ ಜುಲೈ 11, 2026
  • ಲಿಖಿತ ಪರೀಕ್ಷೆ ನಡೆಯುವ ಅಂದಾಜು ಸಮಯ: ಆಗಸ್ಟ್ 2026

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:40 pm, Fri, 29 May 26

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More