BSNL Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣವಕಾಶ; BSNLನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಜೂನಿಯರ್ ಟೆಲಿಕಾಂ ಆಫೀಸರ್ (JTO) ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು BSNL ಅಧಿಕೃತ ವೆಬ್‌ಸೈಟ್ ಮೂಲಕ ಜುಲೈ 3ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 20-30 ವರ್ಷಗಳಾಗಿದ್ದು, ಭಾರತಾದ್ಯಂತ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕೇಂದ್ರೀಯ ಸರ್ಕಾರಿ ಉದ್ಯೋಗಾವಕಾಶವನ್ನು ಬಳಸಿಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ.

BSNL Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣವಕಾಶ; BSNLನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಎಸ್‌ಎನ್‌ಎಲ್ ನೇಮಕಾತಿ

Updated on: Jul 01, 2026 | 3:59 PM

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನೇರ ನೇಮಕಾತಿ ಮೂಲಕ ಜೂನಿಯರ್ ಟೆಲಿಕಾಂ ಆಫೀಸರ್ (JTO – Telecom) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ಸಮಯ:

ಈ ಹುದ್ದೆಗಳಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜೂನ್ 4 ರಿಂದಲೇ ಪ್ರಾರಂಭವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 3 ರಂದು ಬೆಳಗ್ಗೆ 10:00 ಗಂಟೆಯವರೆಗೆ ಮಾತ್ರ ಅವಕಾಶವಿರುತ್ತದೆ. ಒಂದು ವೇಳೆ ಅರ್ಜಿಯಲ್ಲಿ ಯಾವುದೇ ತಪ್ಪುಗಳಾಗಿದ್ದಲ್ಲಿ, ಅಭ್ಯರ್ಥಿಗಳಿಗೆ ಜುಲೈ 4 ರಿಂದ ಜುಲೈ 11 ರವರೆಗೆ ಅರ್ಜಿ ತಿದ್ದುಪಡಿ ಮಾಡಲು (Application Editing) ಕಾಲಾವಕಾಶ ನೀಡಲಾಗುತ್ತದೆ. ಇನ್ನು ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು (CBT) ತಾತ್ಕಾಲಿಕವಾಗಿ ಆಗಸ್ಟ್ 2026 ರ ತಿಂಗಳಿನಲ್ಲಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು. ಆದರೆ, ಭಾರತ ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯ ‘ಅನೆಕ್ಸರ್-ಎ’ ನಲ್ಲಿ ಸೂಚಿಸಲಾದ ಅಗತ್ಯ ವಿದ್ಯಾರ್ಹತೆಯನ್ನು ಹೊಂದಿರಬೇಕು. ಇದರೊಂದಿಗೆ ಕೇವಲ ಭಾರತೀಯ ನಾಗರಿಕರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಭಾರತದಾದ್ಯಂತ ಸೇವೆ ಸಲ್ಲಿಸಲು ಸಿದ್ಧರಿರಬೇಕು:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಬಿಎಸ್‌ಎನ್‌ಎಲ್‌ನ ಅವಶ್ಯಕತೆಗೆ ಅನುಗುಣವಾಗಿ ನಿಯೋಜಿಸಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ಅಥವಾ ಸಂಸ್ಥೆಯ ಹಿತದೃಷ್ಟಿಯಿಂದ ಆಯ್ಕೆಯಾದ ಅಧಿಕಾರಿಗಳನ್ನು ಭಾರತದ ಯಾವುದೇ ಭಾಗಕ್ಕಾದರೂ ಅಥವಾ ಬಿಎಸ್‌ಎನ್‌ಎಲ್ ವ್ಯಾಪ್ತಿಯ ಯಾವುದೇ ಕಾರ್ಯಾಚರಣೆಯ ಪ್ರದೇಶಕ್ಕಾದರೂ ವರ್ಗಾವಣೆ ಮಾಡಬಹುದಾಗಿದ್ದು, ಅಭ್ಯರ್ಥಿಗಳು ದೇಶದಾದ್ಯಂತ ಸೇವೆ ಸಲ್ಲಿಸಲು ಸಿದ್ಧರಿರಬೇಕಾಗುತ್ತದೆ.

ವೇಗದ ಉದ್ಯೋಗ ಮಾಹಿತಿ:

ಅರ್ಜಿ ಸಲ್ಲಿಸಲು ಇನ್ನು ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿದ್ದು (ಕೊನೆಯ ದಿನಾಂಕ: ಜುಲೈ 3), ಆಸಕ್ತರು ಕೊನೆಯ ಕ್ಷಣದ ವೆಬ್‌ಸೈಟ್ ಸರ್ವರ್ ದಟ್ಟಣೆಯನ್ನು ತಪ್ಪಿಸಲು ಇಂದೇ ಅರ್ಜಿ ಸಲ್ಲಿಸುವುದು ಉತ್ತಮ. ಹೆಚ್ಚಿನ ವಿವರಗಳಿಗಾಗಿ  ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ:

Published On - 3:59 pm, Wed, 1 July 26

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us