ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂ ಅವರನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವೆಂಗಡಂ ಕೊಲೆಗೂ ಮುನ್ನ, ಬಿಎಸ್‌ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಆರ್ಮ್‌ಸ್ಟ್ರಾಂಗ್‌ನನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು.
ಬೈಕ್‌ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತು, ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಜೀವ ಉಳಿಯಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ.
ಮತ್ತಷ್ಟು ಓದಿ: Viral Video: ಇದು ನೋಡಿ ಭಾರತೀಯ ಸೇನೆ ತಾಕತ್ತು, ಎನ್‌ಕೌಂಟರ್ ಮಾಡಿ ಉಗ್ರನನ್ನು ನಡು ರಸ್ತೆಯಲ್ಲಿ ಎಳೆದುಕೊಂಡು ಹೋದ ಸೇನೆ
ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಆರ್ಮ್‌ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿದರು, ಇದುವರೆಗೆ ಬಂಧಿಸಲ್ಪಟ್ಟವರು ನಿಜವಾದ ಅಪರಾಧಿಗಳಲ್ಲ ಎಂದು ಹೇಳಿದ್ದಾರೆ.
ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಲು ತನಿಖೆಯನ್ನು ಕೇಂದ್ರ ಏಜೆನ್ಸಿಗೆ ವಹಿಸಬೇಕು ಎಂದು ಸ್ಟಾಲಿನ್ರನ್ನು ಒತ್ತಾಯಿಸಿದ್ದಾರೆ. ಭೀಕರ ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ ಎಂದು ಮಾಯಾವತಿ ಭರವಸೆ ನೀಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ