ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿಗೆ ಹೊಸ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲು ಮಾಯಾವತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ
ಮಾಯಾವತಿ
Follow us
ನಯನಾ ರಾಜೀವ್
|

Updated on:Dec 10, 2023 | 2:21 PM

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್​ಪಿ(BSP)ಗೆ ಹೊಸ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗಿದೆ. ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲು ಮಾಯಾವತಿ(Mayawati) ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದ ಆಕಾಶ್ ಆನಂದ್ ಮಾಯಾವತಿಯ ಬಹುತೇಕ ಎಲ್ಲಾ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಪಕ್ಷದಲ್ಲಿ ಸಧ್ಯಕ್ಕೆ ರಾಷ್ಟ್ರೀಯ ಸಂಯೋಜಕ ಸ್ಥಾನದಲ್ಲಿರುವ ಆಕಾಶ್ ಅವರಿಗೆ ಪಕ್ಷದ ಪ್ರಮುಖ ಜವಾಬ್ದಾರಿಯನ್ನು ನೀಡಲು ಮಾಯಾವತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಮಾಯಾವತಿ ಯಾವ ಹುದ್ದೆಯಲ್ಲಿರುತ್ತಾರೆ, ಮಾಯಾವತಿಯವರ ಮುಂದಿನ ರಾಜಕೀಯ ನಿರ್ಧಾರಗಳೇನು? ನಿವೃತ್ತಿ ಘೋಷಿಸುತ್ತಾರೋ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟ ನಿಲುವು ಇನ್ನೂ ಸಿಕ್ಕಿಲ್ಲ.  ಪಕ್ಷವನ್ನು ಪುನರ್​ ಸಂಘಟಿಸುವುದು ಅಥವಾ ಪಕ್ಷಕ್ಕೆ ಮರುಜೀವ ನೀಡುವ ಉದ್ದೇಶದಿಂದ ಈ ಬದಲಾವಣೆಗೆ ಮಾಯಾವತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಒಂದು ದಶಕದ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸಿದ್ದಂತಹ ಬಿಎಸ್​ಪಿ ಈಗ ಸಧ್ಯಕ್ಕೆ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯದಲ್ಲಿದೆ. ಯಾವುದೇ ಲೋಕಸಭಾ ಸದಸ್ಯರನ್ನು ಹೊಂದಿರದ ಬಿಎಸ್​ಪಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬೆರಳೆಣಿಕೆ ಸದಸ್ಯರನ್ನು ಹೊಂದಿದೆ. ವರ್ಷದಿಂದ ವರ್ಷಕ್ಕೆ ಚುನಾವಣೆಯಿಂದ ಚುನಾವಣೆಗೆ ಬಿಎಸ್​ಪಿಯ ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:11 pm, Sun, 10 December 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ