AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿ ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ: ಮಾಯಾವತಿ

ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿಯನ್ನು ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಹಲವು ವರ್ಷಗಳಿಂದ ಕಾಂಗ್ರೆಸ್‌ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

ರಾಹುಲ್​ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿ ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ: ಮಾಯಾವತಿ
ಮಾಯಾವತಿImage Credit source: Moneycontrol
ನಯನಾ ರಾಜೀವ್
|

Updated on: Sep 10, 2024 | 12:22 PM

Share

ರಾಹುಲ್ ಗಾಂಧಿ ಬಗ್ಗೆ ಎಚ್ಚರಿಕೆಯಿಂದಿರಿ, ಕಾಂಗ್ರೆಸ್​ ಮೀಸಲಾತಿಯನ್ನು ಅಂತ್ಯಗೊಳಿಸುವ ಷಡ್ಯಂತ್ರ ಮಾಡುತ್ತಿದೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸಲು ಹಲವು ವರ್ಷಗಳಿಂದ ಕಾಂಗ್ರೆಸ್‌ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

ಅಮೆರಿಕದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ಮುಂದುವರಿಸುವ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಸರಿಯಾದ ಸಮಯ ಬಂದಾಗ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ. ಇದು ಮೀಸಲಾತಿಯನ್ನು ಕೊನೆಗೊಳಿಸುವ ಸಮಯವಲ್ಲ ಎಂದು ಹೇಳಿದ್ದರು.

ಮತ್ತಷ್ಟು ಓದಿ: ಮಹಿಳೆಯರು ಮನೆಯಲ್ಲಿಯೇ ಇರಬೇಕು ಎಂಬುದು ಆರ್​ಎಸ್​ಎಸ್ ನಂಬಿಕೆ; ಅಮೆರಿಕದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ದೀರ್ಘಕಾಲ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಯನ್ನು ಜಾರಿಗೆ ತರಲಿಲ್ಲ, ಜಾತಿ ಗಣತಿ ನಡೆಯದಂತೆ ತಡೆಯುವ ಇವರ ನಾಟಕದ ಬಗ್ಗೆ ಎಚ್ಚರವಿರಲಿ. ಭಾರತ ಉತ್ತಮ ಪರಿಸ್ಥಿತಿಯಲ್ಲಿದ್ದಾಗ ನಾವು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ವಿದೇಶದಲ್ಲಿ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಈ ನಾಟಕದ ಬಗ್ಗೆ ಈಗ ಎಚ್ಚರದಿಂದಿರಿ ಎಂದು ಬಿಎಸ್‌ಪಿ ಮುಖ್ಯಸ್ಥರು ಹೇಳಿದ್ದಾರೆ.

ಅವರ ಮೀಸಲಾತಿಯನ್ನು ಕೊನೆಗಾಣಿಸುವ ಷಡ್ಯಂತ್ರದಲ್ಲಿ ಕಾಂಗ್ರೆಸ್ ವರ್ಷಗಳಿಂದ ತೊಡಗಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರಿಗೆ ಈ ಪಕ್ಷದಿಂದ ನ್ಯಾಯ ಸಿಗಲಿಲ್ಲ ಎಂದು ಕಾನೂನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಜನರು ಎಚ್ಚರಿಕೆಯಿಂದ ಇರಬೇಕು. ಒಟ್ಟಾರೆ ಹೇಳುವುದಾದರೆ, ಜಾತೀಯತೆ ಸಂಪೂರ್ಣವಾಗಿ ದೇಶದಿಂದ ನಿರ್ಮೂಲನೆಯಾಗುವವರೆಗೆ, ಭಾರತದ ತುಲನಾತ್ಮಕವಾಗಿ ಉತ್ತಮ ಸ್ಥಿತಿಯ ಹೊರತಾಗಿಯೂ, ಈ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯು ಸುಧಾರಿಸುವುದಿಲ್ಲ.

ಜಾತೀಯತೆ ಸಂಪೂರ್ಣವಾಗಿ ನಾಶವಾಗುವವರೆಗೆ ಸರಿಯಾದ ಸಾಂವಿಧಾನಿಕ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸುವುದು ಅವಶ್ಯಕ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್