AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲ್ಲ ಬಿಎಸ್‌ಪಿ ನಾಯಕಿ ಮಾಯಾವತಿ

ಗುರುವಾರ ಸರಣಿ ಟ್ವೀಟ್ ಮಾಡಿದ ಮಾಯಾವತಿ, ದೇಶದಲ್ಲಿ ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜಾತಿ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ಬಹುಜನರ ಸ್ಥಿತಿ ನೋಡಿದರೆ ಪರಮಪೂಜ್ಯ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಮಾನವೀಯ ಸಮಾನತೆಯ ಸಂವಿಧಾನವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಸಾಮರ್ಥ್ಯ ಕಾಂಗ್ರೆಸ್, ಬಿಜೆಪಿಯಂಥಾ ಪಕ್ಷಗಳಿಗಿಲ್ಲ ಎಂದು ತೋರುತ್ತದೆ.

ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಲ್ಲ ಬಿಎಸ್‌ಪಿ ನಾಯಕಿ ಮಾಯಾವತಿ
ಮಾಯಾವತಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 22, 2023 | 1:55 PM

Share

ಬಿಎಸ್‌ಪಿ (BSP) ನಾಯಕಿ ಮಾಯಾವತಿ (Mayawati) ಅವರು ನಾಳೆ ಪಾಟ್ನಾದಲ್ಲಿ (Patna) ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿದ ಮಾಯಾವತಿ, ದೇಶದಲ್ಲಿ ಹಣದುಬ್ಬರ, ಬಡತನ, ನಿರುದ್ಯೋಗ, ಹಿಂದುಳಿದಿರುವಿಕೆ, ಅನಕ್ಷರತೆ, ಜಾತಿ ದ್ವೇಷ, ಧಾರ್ಮಿಕ ಹಿಂಸಾಚಾರ ಇತ್ಯಾದಿಗಳಿಂದ ನರಳುತ್ತಿರುವ ಬಹುಜನರ ಸ್ಥಿತಿ ನೋಡಿದರೆ ಪರಮಪೂಜ್ಯ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ ಮಾನವೀಯ ಸಮಾನತೆಯ ಸಂವಿಧಾನವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಸಾಮರ್ಥ್ಯ ಕಾಂಗ್ರೆಸ್, ಬಿಜೆಪಿಯಂಥಾ ಪಕ್ಷಗಳಿಗಿಲ್ಲ ಎಂದು ತೋರುತ್ತದೆ. ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಟ್ಟಾಗಿ ಎತ್ತುತ್ತಿರುವ ವಿಚಾರಗಳು ಮತ್ತು ಇಂತಹ ಪರಿಸ್ಥಿತಿಯಲ್ಲಿ ಜೂನ್ 23 ರಂದು ನಿತೀಶ್ ಕುಮಾರ್ ಅವರು ನಡೆಸಲಿರುವ ವಿರೋಧ ಪಕ್ಷದ ನಾಯಕರ ಪಾಟ್ನಾ ಸಭೆಯು ದಿಲ್ ಮಿಲೇ ನಾ ಮಿಲೇ ಹಾಥ್ ಮಿಲಾತೇ ರಹೀಯೇ (ಯೋಚನೆಗಳು ಒಂದೇ ಆಗಿರದಿದ್ದರೂ, ಕೈಕುಲುಕುತ್ತಲೇ ಇರಿ) ಎಂಬ ನುಡಿಗಟ್ಟನ್ನು ನೆನಪಿಸುತ್ತದೆ ಎಂದಿದ್ದಾರೆ.

ಅಂದಹಾಗೆ, ಮುಂದಿನ ಲೋಕಸಭಾ ಚುನಾವಣೆಯ ತಯಾರಿಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಪ್ರಯತ್ನ ಮಾಡುವ ಮುನ್ನ ಈ ಪಕ್ಷಗಳು ಜನಸಾಮಾನ್ಯರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಿ ತಮ್ಮ ಉದ್ದೇಶವನ್ನು ಸ್ವಲ್ಪವಾದರೂ ಸರಿ ಮಾಡಿಕೊಂಡಿದ್ದರೆ ಚೆನ್ನಾಗಿತ್ತು. ‘ಬಾಯಲ್ಲಿ ರಾಮ, ಬದಿಯಲ್ಲಿ ಚಾಕು’ ಎಷ್ಟು ದಿನ ಉಳಿಯುತ್ತದೆ?

ಯುಪಿಯಲ್ಲಿ 80 ಲೋಕಸಭಾ ಸ್ಥಾನಗಳು ಚುನಾವಣಾ ಯಶಸ್ಸಿಗೆ ಪ್ರಮುಖವೆಂದು ಹೇಳಲಾಗುತ್ತದೆ, ಆದರೆ ವಿರೋಧ ಪಕ್ಷಗಳ ವರ್ತನೆಯಿಂದ ಅವರು ಇಲ್ಲಿ ತಮ್ಮ ಉದ್ದೇಶದ ಬಗ್ಗೆ ಗಂಭೀರವಾಗಿ ಮತ್ತು ನಿಜವಾದ ಕಾಳಜಿಯನ್ನು ಹೊಂದಿದ್ದಾರೆಂದು ತೋರುತ್ತಿಲ್ಲ. ಸರಿಯಾದ ಆದ್ಯತೆಗಳಿಲ್ಲದೆ, ಇಲ್ಲಿನ ಲೋಕಸಭಾ ಚುನಾವಣೆಯ ಸಿದ್ಧತೆಗಳು ನಿಜವಾಗಿಯೂ ಅಗತ್ಯ ಬದಲಾವಣೆಯನ್ನು ತರುತ್ತವೆಯೇ? ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜೂ.24ರಂದು ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಮತ್ತು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳ ಭಾಗವಾಗಿ ಸಭೆಯನ್ನು ಕರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:22 pm, Thu, 22 June 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್