ಕೊಲೆ ಪ್ರಕರಣದಲ್ಲಿ ಬಿಎಸ್​​ಪಿ ನಾಯಕ ಅಫ್ಜಲ್ ಅನ್ಸಾರಿಗೆ 4 ವರ್ಷ ಜೈಲು; ಲೋಕಸಭಾ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ

ಈ ಶಿಕ್ಷೆಯಿಂದಾಗಿ ಅವರು ಲೋಕಸಭಾ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ. ಇದೇ ಪ್ರಕರಣದಲ್ಲಿ ಅವರ ಸಹೋದರ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಬಿಎಸ್​​ಪಿ ನಾಯಕ ಅಫ್ಜಲ್ ಅನ್ಸಾರಿಗೆ 4 ವರ್ಷ ಜೈಲು; ಲೋಕಸಭಾ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ
ಅಫ್ಜಲ್ ಅನ್ಸಾರಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 29, 2023 | 4:21 PM

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ ರೈ (BJP MLA Krishnanand Rai) ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌ಪಿ ನಾಯಕ ಅಫ್ಜಲ್ ಅನ್ಸಾರಿ (Afzal Ansari) ದೋಷಿ ಎಂದು ಘೋಷಿಸಿದ ಘಾಜಿಪುರ ನ್ಯಾಯಾಲಯ 4 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ವಿಧಿಸಿದೆ. ಈ ಶಿಕ್ಷೆಯಿಂದಾಗಿ ಅವರು ಲೋಕಸಭಾ ಸ್ಥಾನವನ್ನೂ (Lok Sabha) ಕಳೆದುಕೊಳ್ಳಲಿದ್ದಾರೆ. ಇದೇ ಪ್ರಕರಣದಲ್ಲಿ ಅವರ ಸಹೋದರ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸಂಸತ್ತಿನ ನಿಯಮಗಳ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಯಾವುದೇ ಸದಸ್ಯರು ಲೋಕಸಭ ಸ್ಥಾನಕ್ಕೆ ಅನರ್ಹರಾಗುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019 ರ ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ, ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅದೇ ನಿಯಮದ ಪ್ರಕಾರ ಇತ್ತೀಚೆಗೆ ತಮ್ಮ ಸಂಸದ ಸ್ಥಾನ ಕಳೆರುಕೊಂಡಿದ್ದರು.

ಇಂದು ಬೆಳಗ್ಗೆ 2005 ರಲ್ಲಿ ಘಾಜಿಪುರದಲ್ಲಿ ಮುಖ್ತಾರ್ ಅನ್ಸಾರಿ ಮತ್ತು ಅವರ ಸಹೋದರ ಅಫ್ಜಲ್ ಅನ್ಸಾರಿಯಿಂದ ಹತ್ಯೆಗೀಡಾದ ದಿವಂಗತ ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಪತ್ನಿ, ಉತ್ತರ ಪ್ರದೇಶದಲ್ಲಿ ಮಾಫಿಯಾದ ಆಡಳಿತ ಕೊನೆಗೊಂಡಿದೆ ಮತ್ತು ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.

ನನಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ. ಗೂಂಡಾಗಳು, ಮಾಫಿಯಾಗಳ ಆಳ್ವಿಕೆ (ರಾಜ್ಯದಲ್ಲಿ) ಕೊನೆಗೊಂಡಿದೆ ಎಂದು ಅಲ್ಕಾ ರೈ ಹೇಳಿದ್ದಾರೆ.

ಅಫ್ಜಲ್ ಅನ್ಸಾರಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಮುನ್ನ ಘಾಜಿಪುರ ನ್ಯಾಯಾಲಯ  ಗ್ಯಾಂಗ್​​ಸ್ಟರ್, ಮಾಫಿಯಾ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ.

ಇದನ್ನೂ ಓದಿ: Mukhtar Ansari: ಅಪಹರಣ, ಕೊಲೆ ಪ್ರಕರಣದಲ್ಲಿ ದೋಷಿ ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ

ಜನವರಿಯಲ್ಲಿ ಪೊಲೀಸರು ಮುಖ್ತಾರ್ ಅನ್ಸಾರಿ ವಿರುದ್ಧ 2001 ರ ಉಸ್ರಿ ಚಟ್ಟಿ ಗ್ಯಾಂಗ್​​ವಾರ್ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ರ ಅಡಿಯಲ್ಲಿ ಅನ್ಸಾರಿ ವಿರುದ್ಧ ಗಾಜಿಪುರದ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ 18 ರಂದು ಅಲಹಾಬಾದ್ ಉಚ್ಚ ನ್ಯಾಯಾಲಯವು ಮಾರ್ಚ್ 15 ರಂದು ಗಾಜಿಪುರ ಎಂಪಿ ಎಂಎಲ್​​ಎ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿತು. ಇದು ಅನ್ಸಾರಿಯನ್ನು ಬಂದಾದಲ್ಲಿನ ಉನ್ನತ ದರ್ಜೆಯ ಜೈಲಿನಲ್ಲಿ ಇರಿಸಲು ಅನುಮತಿ ನೀಡಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅನ್ಸಾರಿ ಮತ್ತು ಆತನ ಸಹಾಯಕ ಭೀಮ್ ಸಿಂಗ್‌ಗೆ ಘಾಜಿಪುರದ ಗ್ಯಾಂಗ್​​ಸ್ಟರ್ ನ್ಯಾಯಾಲಯವು ಕೊಲೆ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು.

ಈ ಪ್ರಕರಣಗಳಲ್ಲಿ ಕಾನ್‌ಸ್ಟೆಬಲ್ ರಘುವಂಶ್ ಸಿಂಗ್ ಹತ್ಯೆ ಮತ್ತು ಘಾಜಿಪುರದ ಹೆಚ್ಚುವರಿ ಎಸ್‌ಪಿ ಮೇಲೆ ಕೊಲೆಗೈದ ಹಲ್ಲೆ ಪ್ರಕರಣಗಳು ಸೇರಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Sat, 29 April 23

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ