ಉತ್ತರಪ್ರದೇಶ, ಉತ್ತರಾಖಂಡ ಚುನಾವಣೆಗಳಲ್ಲಿ ಮೈತ್ರಿ ಇಲ್ಲದೆ ಕಣಕ್ಕಿಳಿಯಲಿದೆ ಬಿಎಸ್​​ಪಿ: ಮಾಯಾವತಿ

Bahujan Samaj Party supremo Mayawati: ಈ ಸುದ್ದಿ ನಿನ್ನೆಯಿಂದ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಎಐಎಂಐಎಂ ಮತ್ತು ಬಿಎಸ್​​ಪಿ ಒಟ್ಟಾಗಿ ಹೋರಾಡಲಿವೆ. ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ದಾರಿತಪ್ಪಿಸುವ ಮತ್ತು ಆಧಾರರಹಿತವಾಗಿದೆ. ಇದರಲ್ಲಿ ಸತ್ಯದ ಒಂದು ಭಾಗವೂ ಇಲ್ಲ ಬಿಎಸ್ಪಿ ಅದನ್ನು ತೀವ್ರವಾಗಿ ನಿರಾಕರಿಸುತ್ತದೆ

ಉತ್ತರಪ್ರದೇಶ, ಉತ್ತರಾಖಂಡ ಚುನಾವಣೆಗಳಲ್ಲಿ ಮೈತ್ರಿ ಇಲ್ಲದೆ ಕಣಕ್ಕಿಳಿಯಲಿದೆ ಬಿಎಸ್​​ಪಿ: ಮಾಯಾವತಿ
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (ಸಂಗ್ರಹ ಚಿತ್ರ)
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 27, 2021 | 12:42 PM

ದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪಕ್ಷವು ಮೈತ್ರಿ ಇಲ್ಲದೆ ಕಣಕ್ಕಿಳಿಯಲಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥ ಮಾಯಾವತಿ ಭಾನುವಾರ ಹೇಳಿದ್ದಾರೆ. ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜೊತೆಗಿನ ಮೈತ್ರಿ ವರದಿಗಳನ್ನು ತಿರಸ್ಕರಿಸಿದ ಮಾಯಾವತಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಾತ್ರ ಪಕ್ಷ ಏಕಾಂಗಿಯಾಗಿ ಹೋರಾಡಲಿದೆ ಎಂದು ಹೇಳಿದರು.  ಮುಂಬರುವ ಪಂಜಾಬ್ ಚುನಾವಣೆಗೆ ಪಕ್ಷವು ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದಿದ್ದಾರೆ ಮಾಯಾವತಿ.

“ಈ ಸುದ್ದಿ ನಿನ್ನೆಯಿಂದ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಎಐಎಂಐಎಂ ಮತ್ತು ಬಿಎಸ್​​ಪಿ ಒಟ್ಟಾಗಿ ಹೋರಾಡಲಿವೆ. ಈ ಸುದ್ದಿ ಸಂಪೂರ್ಣವಾಗಿ ಸುಳ್ಳು, ದಾರಿತಪ್ಪಿಸುವ ಮತ್ತು ಆಧಾರರಹಿತವಾಗಿದೆ. ಇದರಲ್ಲಿ ಸತ್ಯದ ಒಂದು ಭಾಗವೂ ಇಲ್ಲ ಬಿಎಸ್ಪಿ ಅದನ್ನು ತೀವ್ರವಾಗಿ ನಿರಾಕರಿಸುತ್ತದೆ, ”ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ನಡೆದ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ನೀರಸ ಪ್ರದರ್ಶನದ ನಂತರ ಮಾಯಾವತಿ ಈ ರೀತಿ ಹೇಳಿದ್ದಾರೆ . ಪಂಚಾಯತ್ ಚುನಾವಣೆಯಲ್ಲಿ ಬಿಎಸ್​​ಪಿ ಕಳಪೆ ಪ್ರದರ್ಶನ ನೀಡಿದ್ದು ಮೂರನೇ ಸ್ಥಾನಕ್ಕಿಳಿದಿತ್ತು.

ಪಂಜಾಬ್‌ನಲ್ಲಿ, 1996 ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ 25 ವರ್ಷಗಳ ನಂತರ ಬಿಎಸ್‌ಪಿ ಮತ್ತು ಎಸ್‌ಎಡಿ ಕೈಜೋಡಿಸಿವೆ. ಎಸ್‌ಎಡಿ ಜೊತೆಗಿನ ಮೈತ್ರಿಯಲ್ಲಿ ಬಿಎಸ್‌ಪಿ 23 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ದೋಬಾ (ಜಲಂಧರ್, ಹೋಶಿಯಾರ್‌ಪುರ್, ನವಾನ್‌ಶಹರ್ ಮತ್ತು ಕಪುರ್ಥಾಲಾ ಜಿಲ್ಲೆಗಳು) ಯಲ್ಲಿ ನಿಗದಿಪಡಿಸಿದ 20 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಸ್ಪರ್ಧಿಸಲಿದೆ.

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಈ ಮೈತ್ರಿಯನ್ನು ಪಂಜಾಬ್ನಲ್ಲಿ ಪ್ರಗತಿ ಮತ್ತು ಸಮೃದ್ಧಿಗೆ ಕಾರಣವಾಗುವ “ಹೊಸ ರಾಜಕೀಯ ಮತ್ತು ಸಾಮಾಜಿಕ ಉಪಕ್ರಮ” ಎಂದು ಕರೆದರೆ, ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಇದನ್ನು ರಾಜ್ಯ ರಾಜಕೀಯದಲ್ಲಿ “ಹೊಸ ದಿನ” ಎಂದು ಬಣ್ಣಿಸಿದರು.

ಇದನ್ನೂ ಓದಿ:  ಕೊವಿಡ್​ 19 ಲಸಿಕೆ ವಿಚಾರದಲ್ಲಿ ರಾಜಕೀಯ, ವಿವಾದ ಮಾಡುವುದನ್ನು ನಿಲ್ಲಿಸಿ: ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಟ್ವೀಟ್​

Published On - 12:41 pm, Sun, 27 June 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ