ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ

ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದರು, ಅವರು ತನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ದೆಹಲಿ ಕ್ರೈಂ: ಗುರುಗ್ರಾಮ್ ಹೋಟೆಲ್‌ನಲ್ಲಿ ಉದಯೋನ್ಮುಖ ಭೋಜ್‌ಪುರಿ ನಟಿ ಮೇಲೆ ಇನ್‌ಸ್ಟಾಗ್ರಾಮ್ ಸ್ನೇಹಿತನಿಂದ ಅತ್ಯಾಚಾರ
ಗುರುಗ್ರಾಮ್ ಹೋಟೆಲ್‌ನಲ್ಲಿ ನಟಿ ಮೇಲೆ ಅತ್ಯಾಚಾರ
Follow us
ಸಾಧು ಶ್ರೀನಾಥ್​
|

Updated on: Jul 21, 2023 | 10:45 AM

ಸಿನಿಮಾಗಳಲ್ಲಿ ಅವಕಾಶ ಕೊಡಿಸ್ತೀನಿ ಅಂತಾ ದೆಹಲಿ ಮೂಲದ 24 ವರ್ಷದ ಉದಯೋನ್ಮುಖ ಭೋಜ್‌ಪುರಿ ನಟಿಯನ್ನು (Bhojpuri artiste) ಸಂದರ್ಶನಕ್ಕೆ ಹೋಟೆಲಿಗೆ ಕರೆದೊಯ್ದು ಇನ್‌ಸ್ಟಾಗ್ರಾಮ್ ಸ್ನೇಹಿತ ( Instagram friend) ಅತ್ಯಾಚಾರವೆಸಗಿದ್ದಾನೆ (allegedly raped) ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವತಿ ನೀಡಿರುವ ದೂರಿನಲ್ಲಿ ತಾನು ಭೋಜ್‌ಪುರಿ ಕಲಾವಿದೆ ಮತ್ತು ಪ್ರಸ್ತುತ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆ (victim) ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿದ್ದಾಳೆ. ಯುವತಿ ನಿಯಮಿತವಾಗಿ ತನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾಳೆ.

ಇನ್ನು ಸಂತ್ರಸ್ತೆ ತನ್ನ ದೂರಿನಲ್ಲಿ, ಕೆಲವು ದಿನಗಳ ಹಿಂದೆ ತಾನು ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹೇಶ್ ಪಾಂಡೆ (Mahesh Pandey) ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್ ಮೂಲಕ ತನ್ನ ಸಂಪರ್ಕಕ್ಕೆ ಬಂದಿದ್ದಾನೆ. ಜೂನ್ 29 ರಂದು ಆತ ಸಂದರ್ಶನದ ನೆಪದಲ್ಲಿ ನನ್ನನ್ನು ಗುರುಗ್ರಾಮ್‌ನ (Delhi-NCR) ಉದ್ಯೋಗ್ ವಿಹಾರ್ ಪ್ರದೇಶದ ಹೋಟೆಲ್‌ಗೆ (Gurgaon hotel) ಕರೆದರು.

ನಾನು ಹೋಟೆಲ್ ತಲುಪಿದಾಗ, ಮಹೇಶ್ ಅದಾಗಲೇ ತಾನು ಬುಕ್ ಮಾಡಿದ್ದ ಕೊಠಡಿಗೆ ನನ್ನನ್ನು ಕರೆದೊಯ್ದರು. ಅಲ್ಲಿ ಆತನ ನನ್ನನ್ನು ಕೆಲವು ಪ್ರಶ್ನೆಗಳನ್ನು ಕೇಳಿದರು. ನಂತರ ಅವರು ಮದ್ಯಪಾನ ಮಾಡಲು ಪ್ರಾರಂಭಿಸಿದರು. ಇದಾದ ನಂತರ ನಾನು ಹೊರಡಲು ಪ್ರಾರಂಭಿಸಿದಾಗ, ಆತ ನನ್ನನ್ನು ಬಲವಂತಪಡಿಸಿ, ನನ್ನ ಮೇಲೆ ಅತ್ಯಾಚಾರ ಎಸಗಿದ ಎಂದು ಹೇಳಿದ್ದಾರೆ.

ಘಟನೆಯ ನಂತರ ವಿಷಯ ಬಹಿರಂಗಪಡಿಸಿದರೆ ಆರೋಪಿಯು ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ. ಅದಾದ ನಂತರ ಅವನ ಕೆಲವು ಸ್ನೇಹಿತರು ತನಗೆ ಫೋನ್ ಕರೆಗಳನ್ನು ಮಾಡಿದ್ದಾರೆ. ಅವರು ನನ್ನ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ನಟಿ ಹೇಳಿಕೊಂಡಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರೋಪಿ ಮಹೇಶ್ ಪಾಂಡೆ ಗುರುಗ್ರಾಮ್‌ನ ಚಕರ್‌ಪುರ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ. ಮಹಿಳೆಯ ದೂರಿನ ನಂತರ ಉದ್ಯೋಗ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 506 (ಅಪರಾಧ ಬೆದರಿಕೆ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಆರೋಪಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಎಸಿಪಿ ಕ್ರೈಂ, ವರುಣ್ ದಹಿಯಾ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್