Budget 2021 | ಬಜೆಟ್ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್ ಗಾಂಧಿ
ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್ ಗಾಂಧಿ.
#Budget2021 must:
-Support MSMEs, farmers and workers to generate employment.
-Increase Healthcare expenditure to save lives.
-Increase Defence expenditure to safeguard borders.
— Rahul Gandhi (@RahulGandhi) February 1, 2021
ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್ ಗಾಂದಿ ಆಗ್ರಹಿಸಿದ್ದಾರೆ.