Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ
Edited By:

Updated on: Feb 01, 2021 | 11:04 AM

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್​ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ  ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು  ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್​ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್​ ಗಾಂಧಿ.

ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್​ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್​ ಗಾಂದಿ ಆಗ್ರಹಿಸಿದ್ದಾರೆ.

 

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us