ದೆಹಲಿ: ಕೇಂದ್ರ ಬಜೆಟ್ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ಬಜೆಟ್ ರೂಪಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ದೇಶದ ಅಭಿವೃದ್ಧಿಗೆ ಕೇಂದ್ರ ಬಜೆಟ್ ಪೂರಕವಾಗಿದೆ. ಜನಜನಸಾಮಾನ್ಯರ ಜೀವನದಲ್ಲಿ ಪ್ರಗತಿ ತರಬಲ್ಲ ಬಜೆಟ್ ಇದಾಗಿದ್ದು, ಆತ್ಮನಿರ್ಭರ ಭಾರತಕ್ಕೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿದ ಕಾರಣ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ದೇಶದ ಒಟ್ಟು ಅಭಿವೃದ್ಧಿಗೆ ಈ ವರ್ಷದ ಬಜೆಟ್ ಭರವಸೆ ನೀಡಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಬಜೆಟ್‌ನಲ್ಲಿ ದೇಶದ ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಮಿಳುನಾಡು, ಕರಾವಳಿ ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗಬಲ್ಲ ಯೋಜನೆಗಳನ್ನು ಹಮ್ಮಿಕೊಂಡಿರುವುದು ಖುಷಿ ನೀಡಿದೆ. ಆರೋಗ್ಯ, ಮೂಲಸೌಕರ್ಯ, ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ. ಇದು ಸ್ವಚ್ಛ ಭಾರತ್ ಮತ್ತು ಸ್ವಸ್ಥ ಭಾರತ ಯೋಜೆನಗಳಿಗೆ ಪೂರಕವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
Budget 2021: ಆದಾಯ ತೆರಿಗೆ ಸ್ಲ್ಯಾಬ್ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ