AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Session 2024: ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ, ಆರ್ಥಿಕತೆ, ರಾಮಮಂದಿರ, ಚಂದ್ರಯಾನ ಕುರಿತ ವಿಷಯ ಪ್ರಸ್ತಾಪ

ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದರು. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಮಹಿಳಾ ಮೀಸಲಾತಿ ಕಾನೂನು ಜಾರಿಗೆ ತಂದ ಸಂಸದರನ್ನು ಅಭಿನಂದಿಸಿದರು, ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಧಿಕ ಪದಕಗಳು, ಚಂದ್ರಯಾನ-3 ರ ಯಶಸ್ಸು ಮತ್ತು ರಾಮಮಂದಿರ ನಿರ್ಮಾಣದ ಕನಸು ನನಸಾಗಿರುವುದನ್ನು ಅವರು ಪ್ರಸ್ತಾಪಿಸಿದರು.

Budget Session 2024: ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ, ಆರ್ಥಿಕತೆ, ರಾಮಮಂದಿರ, ಚಂದ್ರಯಾನ ಕುರಿತ ವಿಷಯ ಪ್ರಸ್ತಾಪ
ದ್ರೌಪದಿ ಮುರ್ಮು
ನಯನಾ ರಾಜೀವ್
|

Updated on:Jan 31, 2024 | 12:29 PM

Share

ವಿಶ್ವದಾದ್ಯಂತ ಇರುವ ಗಂಭೀರ ಬಿಕ್ಕಟ್ಟುಗಳ ನಡುವೆ ಭಾರತದ ಆರ್ಥಿಕತೆಯು ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಸಂತಸ ವ್ಯಕ್ತಪಡಿಸಿದರು. ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದರು. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

ಮಹಿಳಾ ಮೀಸಲಾತಿ ಕಾನೂನು ಜಾರಿಗೆ ತಂದ ಸಂಸದರನ್ನು ಅಭಿನಂದಿಸಿದರು, ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಧಿಕ ಪದಕಗಳು, ಚಂದ್ರಯಾನ-3 ರ ಯಶಸ್ಸು ಮತ್ತು ರಾಮಮಂದಿರ ನಿರ್ಮಾಣದ ಕನಸು ನನಸಾಗಿರುವುದನ್ನು ಅವರು ಪ್ರಸ್ತಾಪಿಸಿದರು. ರಾಷ್ಟ್ರಪತಿ ರಾಮ ಮಂದಿರದ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಅಲ್ಲಿದ್ದ ಸಂಸದರು ಮೇಜು ಬಡಿದು ಅಭಿನಂದಿಸಿದರು.

ಶತಮಾನಗಳಿಂದಲೂ ರಾಮಮಂದಿರದ ಆಶಯವಿದ್ದು, ಅದು ಈ ವರ್ಷ ಈಡೇರಿದೆ ಎಂದರು. ಗುಲಾಮಗಿರಿಯ ಯುಗದಲ್ಲಿ ಮಾಡಿದ ಕಾನೂನುಗಳು ಈಗ ಇತಿಹಾಸದ ಭಾಗವಾಗಿದೆ. ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ಕೊನೆಗೊಳಿಸಲು ಸರ್ಕಾರ ಕಟ್ಟುನಿಟ್ಟಾದ ಕಾನೂನು ನಿಬಂಧನೆಗಳನ್ನು ಮಾಡಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Budget session 2024: ಇಂದು ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ: ಪಿಎಂ ಮೋದಿ

ಸಂಸತ್ತಿನ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿದೆ. ಇದರಲ್ಲಿ 8 ಸಭೆಗಳು ನಡೆಯಲಿವೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

ದೇಶದಲ್ಲಿ 10 ಕೋಟಿಗೂ ಹೆಚ್ಚು ಜನ ಶಾಶ್ವತ ಮನೆಗಳನ್ನು ಪಡೆದಿದ್ದಾರೆ. 11 ಕೋಟಿ ಗ್ರಾಮಸ್ಥರಿಗೆ ಪೈಪ್‌ಲೈನ್‌ ನೀರು ತಲುಪಿದೆ. ಕೊರೊನಾ ಅವಧಿಯಿಂದ 80 ಕೋಟಿ ದೇಶವಾಸಿಗಳಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಈಗ ಅದನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಇದಕ್ಕೆ 11 ಸಾವಿರ ಕೋಟಿ ರೂಪಾಯಿ ಹೆಚ್ಚು ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: Budget 2024 Date: ಕೇಂದ್ರ ಬಜೆಟ್ ದಿನ, ಸಮಯ, ಸೆಷನ್, ದಾಖಲೆ ಮತ್ತಿತರ ವಿವರ

ನಮ್ಮ ಸರ್ಕಾರ ಒಂದು ದೇಶ-ಒಂದು ತೆರಿಗೆ ಕಾನೂನನ್ನು ತಂದಿತು. ಬ್ಯಾಂಕಿಂಗ್ ವ್ಯವಸ್ಥೆ ಬಲಗೊಂಡಿದೆ. ಬ್ಯಾಂಕ್‌ಗಳ ಎನ್‌ಪಿಎ ಶೇ.4ಕ್ಕೆ ಇಳಿಕೆಯಾಗಿದೆ. ಮೊದಲಿಗಿಂತ ಎಫ್‌ಡಿಐ ದುಪ್ಪಟ್ಟಾಗಿದೆ. ಉತ್ತಮ ಆಡಳಿತ ಮತ್ತು ಪಾರದರ್ಶಕತೆಯಿಂದಾಗಿ ಆರ್ಥಿಕ ಸುಧಾರಣೆಯಾಗಿದೆ. ಮೇಕ್ ಇನ್ ಇಂಡಿಯಾ ದೊಡ್ಡ ಅಭಿಯಾನವಾಗಿದೆ. ರಕ್ಷಣಾ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಗಳ ಭಾಗವಹಿಸುವಿಕೆ ಹೆಚ್ಚಾಗಿದೆ. ಇಂದು ನಾವು ಆಟಿಕೆಗಳನ್ನು ರಫ್ತು ಮಾಡುತ್ತೇವೆ ಎಂದರು.

Economic Survey 2024: ಈ ಬಾರಿ ಬಜೆಟ್ ಮುಂಚಿನ ಆರ್ಥಿಕ ಸಮೀಕ್ಷೆ ಯಾಕಿಲ್ಲ? ಅದರ ಬದಲು ಬಿಡುಗಡೆ ಆದ ಬೇರೆ ವರದಿಯಲ್ಲಿ ಏನಿದೆ?

ವ್ಯಾಪಾರ ಮಾಡುವ ಸುಲಭತೆಯೂ ಸುಧಾರಿಸಿದೆ. ದೇಶದಲ್ಲಿ ವ್ಯಾಪಾರಕ್ಕೆ ಉತ್ತಮ ವಾತಾವರಣವಿದೆ. ಡಿಜಿಟಲ್ ಇಂಡಿಯಾ ವ್ಯವಹಾರವನ್ನು ಸುಲಭಗೊಳಿಸಿದೆ. ಡಿಜಿಟಲ್ ಇಂಡಿಯಾ ದೇಶದ ಪ್ರಮುಖ ಸಾಧನೆಯಾಗಿದೆ. ಇಂದು ಜಗತ್ತಿನ ಇತರೆ ರಾಷ್ಟ್ರಗಳೂ ಯುಪಿಎ ಮೂಲಕ ವಹಿವಾಟು ಸೌಲಭ್ಯ ಒದಗಿಸುತ್ತಿವೆ. ಖಾಸಗಿ ವಲಯದ ಸಾಮರ್ಥ್ಯದ ಮೇಲೆ ಸರ್ಕಾರಕ್ಕೆ ವಿಶ್ವಾಸವಿದೆ. 2 ಕೋಟಿ ನಕಲಿ ಫಲಾನುಭವಿಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Wed, 31 January 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!