Budget session 2024: ಇಂದು ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ: ಪಿಎಂ ಮೋದಿ

ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ ನಡೆಯಲಿದ್ದು, ಉಭಯ ಸದನಗಳನ್ನು ಉದ್ದೇಶಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

Budget session 2024: ಇಂದು ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ: ಪಿಎಂ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 31, 2024 | 12:06 PM

ದೆಹಲಿ, ಜ31: ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ (Budget session) ನಡೆಯಲಿದ್ದು, ಉಭಯ ಸದನಗಳನ್ನು ಉದ್ದೇಶಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಮಾತನಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ಮೂಲಕ ಅಶಿಸ್ತಿನ ಸಂಸದರಿಗೆ’ ಸಂದೇಶವೊಂದನ್ನು ನೀಡಿದ್ದಾರೆ. ಈ ಹಿಂದೆ ನಡೆದ ಚರ್ಚೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಾಗೂ ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಮರ್ಯಾದೆ ಕಳೆದ ಸಂಸದರು ಪಶ್ಚಾತಾಪ ಪಡಲೇಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಕೆ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ. ಇದು ಅವರ ಅಭ್ಯಾಸವಾಗಿರಬಹುದು, ಆದರೆ ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ವಿರೋಧ ಪಕ್ಷಗಳು ಧ್ವನಿ ಎತ್ತಿದೆ, ಆದರೆ ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಅದು ಸಂಸತ್ತಿನ ಸಮಯಕ್ಕೆ ಹಾಗೂ ಚರ್ಚೆಗೆ ತೊಂದರೆ ಮಾಡಬಹುದು. ಈ ದೇಶಕ್ಕೆ ಅಥವಾ ನಮಗೆ ಬೆಳಕು ಚೆಲ್ಲುವವರನ್ನು ಆತ್ಮೀಯವಾಗಿ ಸ್ಮರಿಸಲಾಗುವುದು. ಸಂಸತ್ತಿನಲ್ಲಿ ವಿಷಾದಿಸುವ ಅವಕಾಶವಿದೆ. ಇದನ್ನು ಬಿಡಬೇಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 27ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

ಇನ್ನು ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾವೆಲ್ಲರೂ “ನಾರಿ ಶಕ್ತಿ”ಗೆ ಸಾಕ್ಷಿಯಾಗಿದ್ದೇವೆ. ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಾಳೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್​​​ ಮಂಡಿಸಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:56 am, Wed, 31 January 24

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ