Budget Session: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ, ಆರ್ಥಿಕ ಸಮೀಕ್ಷೆ ಮಂಡನೆ
ಸಂಸತ್ ತ್ತಿನ ಬಜೆಟ್ ಜಂಟಿ ಅಧಿವೇಶನವು ಇಂದಿನಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ. ಒಟ್ಟು ಎರಡು ಹಂತದಲ್ಲಿ ಅಧಿವೇಶನ ನಡೆಯಲಿದೆ. ಶನಿವಾರ 2025 – 26ನೇ ಸಾಲಿನ ಕೇಂದ್ರಬಜೆಟ್ ಮಂಡನೆಯಾಗಲಿದೆ.ರಾಷ್ಟ್ರಪತಿ ಭಾಷಣದ ಬಳಿಕ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಶನಿವಾರ 2025 – 26ನೇ ಸಾಲಿನ ಕೇಂದ್ರ ಆಯವ್ಯಯವನ್ನು ಮಂಡಿಸಲಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ. ಜನವರಿ 31ರಿಂದ ಆರಂಭವಾಗುವ ಬಜೆಟ್ ಅಧಿವೇಶನ ಏಪ್ರಿಲ್ 4ರವರೆಗೆ ಎರಡು ಹಂತಗಳಲ್ಲಿ ನಡೆಯಲಿದೆ. ಅಧಿವೇಶನದ ಮೊದಲ ಹಂತವು ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ.
ಎರಡನೇ ಹಂತವು ಮಾರ್ಚ್ 10 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿರುವುದು ಇದು ಎಂಟನೇ ಬಾರಿ. ಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಜನವರಿ 30 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಿತು. ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರಂದು ಮುಕ್ತಾಯಗೊಳ್ಳಲಿದೆ.
ರಾಷ್ಟ್ರಪತಿ ಭಾಷಣದ ಮೇಲೆ ಮೂರು ದಿನಗಳ ಕಾಲ ಚರ್ಚೆ ನಡೆಯಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ ಮತ್ತು 2024-25ರ ವಿವಿಧ ಸೂಚಕಗಳ ಒಳನೋಟಗಳನ್ನು ನೀಡುತ್ತದೆ.
ಮತ್ತಷ್ಟು ಓದಿ: ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ; ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ
ಈ ಬಾರಿಯ ಅಧಿವೇಶನದಲ್ಲಿ ಬಹುನಿರೀಕ್ಷಿತ ವಕ್ಫ್ (ತಿದ್ದುಪಡಿ) ಮಸೂದೆ 2024 ರಂದು ಸಂಸತ್ತಿನ ಜಂಟಿ ಸಮಿತಿಯು ತನ್ನ ವರದಿಯನ್ನು ಮಂಡಿಸುವ ನಿರೀಕ್ಷೆಯಿದೆ. ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿ(ಯು), ಟಿಡಿಪಿ ಮತ್ತು ಎಲ್‌ಜೆಪಿ (ಆರ್ವಿ) ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲು ಉತ್ಸುಕತೆ ತೋರಿಲ್ಲ.
ಸಮಿತಿಯು ತನ್ನ ವರದಿಯನ್ನು ಅಂತಿಮಗೊಳಿಸುತ್ತದೆಯೇ ಅಥವಾ ಸರ್ಕಾರವು ಈ ಅಧಿವೇಶನಕ್ಕೆ ಮಸೂದೆಯನ್ನು ನಿಗದಿಪಡಿಸುತ್ತದೆಯೇ ಎಂದು ನೋಡಬೇಕಾಗಿದೆ.
ಆಪ್ ಪಾಲಿಗೆ ದೆಹಲಿ ಚುನಾವಣಾ ಫಲಿತಾಂಶ ನಿರ್ಣಾಯಕವಾಗಲಿದ್ದು, ಅಧಿವೇಶನದತ್ತ ಚಿತ್ತ ಹರಿಸಲಿದೆ. ದೆಹಲಿ ಚುನಾವಣಾ ಕದನದಲ್ಲಿ ಹಲವಾರು ಮಿತ್ರಪಕ್ಷಗಳು ಎಎಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರೊಂದಿಗೆ ಇಂಡಿ ಮೈತ್ರಿಕೂಟದ ಒಡಕು ಆಡಳಿತ ಪಕ್ಷಕ್ಕೆ ಒಂದು ರೀತಿಯಲ್ಲಿ ನೈತಿಕ ಬಲ ಹೆಚ್ಚಿಸಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ