ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಹಳೆಯ ಕಟ್ಟಡ ಕುಸಿತದ ಬಗ್ಗೆ ರಕ್ಷಣಾ ಸೇವೆಗಳಿಗೆ ಬೆಳಗಿನ ಜಾವ 2.16 ಕ್ಕೆ ಕರೆ ಬಂದಿತ್ತು. ಅವಶೇಷಗಳಡಿ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ಎಲ್ಲರನ್ನೂ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಇಬ್ಬರು ಬರುವಷ್ಟರಲ್ಲಿ ಮೃತಪಟ್ಟಿದ್ದರು. ಮೂರನೇ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ಅರ್ಷದ್, 30, ಮತ್ತು ತೌಹಿದ್, 20, ಗಾಯಗೊಂಡ ವ್ಯಕ್ತಿಯನ್ನು ರೆಹಾನ್, 22 ಎಂದು ಗುರುತಿಸಲಾಗಿದೆ.
ಕಟ್ಟಡದ ಮಾಲೀಕನನ್ನು ಶಾಹಿದ್ ಎಂದು ಗುರುತಿಸಲಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಈ ವಾರದ ಆರಂಭದಲ್ಲಿ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಹತ್ತು ಮಂದಿ ಸಾವನ್ನಪ್ಪಿದ್ದರು. ಮಧ್ಯರಾತ್ರಿಯ ಸುಮಾರಿಗೆ, ಐದು ಅಂತಸ್ತಿನ ಕಟ್ಟಡದ ಒಂದು ಭಾಗವು ಹಜಾರಿ ಮೊಲ್ಲಾ ಬಗಾನ್‌ನ ಗಾರ್ಡನ್ ರೀಚ್ ಪ್ರದೇಶದಲ್ಲಿ ಪಕ್ಕದ ಕೊಳೆಗೇರಿಯ ಮೇಲೆ ಕುಸಿದಿತ್ತು.. ಅವಶೇಷಗಳಡಿ ಸಿಲುಕಿರುವ ಹೆಚ್ಚುವರಿ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು
ಭಾನುವಾರ ತಡರಾತ್ರಿ ಗಾರ್ಡನ್ ರೀಚ್ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಎನ್‌ಡಿಆರ್‌ಎಫ್ ಮೂಲಗಳ ಪ್ರಕಾರ, ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಇದುವರೆಗೆ ಸುಮಾರು 20 ಜನರನ್ನು ರಕ್ಷಿಸಲಾಗಿದೆ ಎಂಬುದು ತಿಳಿದುಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:57 am, Thu, 21 March 24