ಸೂರತ್ ಬಳಿಕ ಜಾರ್ಖಂಡ್ನಲ್ಲೂ ಕಟ್ಟಡ ಕುಸಿತ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ಜಾರ್ಖಂಡ್ನ ಡಿಯೋಗಢದಲ್ಲಿ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ.
ಜಾರ್ಖಂಡ್ನ ಡಿಯೋಗಢದಲ್ಲಿ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ.
ಎರಡು ಅಂತಸ್ತಿನ ಕಟ್ಟಡ ಕುಸಿದಿದೆ, ಇದುವರೆಗೆ ನಾಲ್ವರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತೆ ತೋರುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ರಕ್ಷಿಸಲ್ಪಟ್ಟ ವ್ಯಕ್ತಿಗಳನ್ನು ದಿಯೋಘರ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ಎಸ್ಡಿಪಿಒ ರಿತ್ವಿಕ್ ಶ್ರೀವಾಸ್ತವ್ ತಿಳಿಸಿದ್ದಾರೆ. ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ರಣಧೀರ್ ಕುಮಾರ್, ಸಿಲುಕಿದವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸೂರತ್‌ನಲ್ಲಿ ಕಟ್ಟಡ ಕುಸಿತ ಗುಜರಾತ್ನ ಸೂರತ್‌ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದಿದ್ದು, ಪರಿಣಾಮ ಏಳು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯದಲ್ಲಿ ತೊಡಗಿರುವ ತಂಡಗಳು ಅವಶೇಷಗಳನ್ನು ತೆಗೆಯುವ ಮೂಲಕ ಕಾರ್ಯಾಚರಣೆ ನಡೆಸುತ್ತಿದೆ.
ಮತ್ತಷ್ಟು ಓದಿ: ಗುಜರಾತ್: ಸೂರತ್‌ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ; 15 ಮಂದಿಗೆ ಗಾಯ, ಐವರು ಸಿಲುಕಿರುವ ಶಂಕೆ
ಈ ಕಟ್ಟಡವನ್ನು 2016 ರಲ್ಲಿ ನಿರ್ಮಿಸಲಾಗಿದೆ. ಹೀಗಿರುವಾಗ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಸರಿಯಾದ ನಿರ್ಮಾಣ ಸಾಮಗ್ರಿ ಬಳಕೆಯಾಗಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಈ ಕಟ್ಟಡದಲ್ಲಿ ಐದಾರು ಕುಟುಂಬಗಳು ವಾಸವಾಗಿರುವುದು ಬೆಳಕಿಗೆ ಬಂದಿದೆ. ಈ ಘಟನೆ ನಡೆದ ಸೂರತ್‌ನ ಪ್ರದೇಶವು ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (SMC) ಅಡಿಯಲ್ಲಿ ಬರುತ್ತದೆ. ಈ ಕಟ್ಟಡದ ಎತ್ತರ ಆರು ಮಹಡಿಗಳು. ಕಟ್ಟಡ ಕುಸಿದು ಸುಮಾರು 15 ಮಂದಿ ಗಾಯಗೊಂಡಿರುವ ಸುದ್ದಿಯೂ ಇದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡ ಕುಸಿದಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅಲ್ಲಿಗೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಭಾರೀ ಮಳೆಗೆ ಶಿಥಿಲಗೊಂಡ ಕಟ್ಟಡ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ