AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ಭೀಕರ ಘಟನೆ ನಡೆದಿದೆ. ಚಾಕೊಲೇಟ್ ಕದ್ದಳೆಂಬ ಸಂಶಯದಲ್ಲಿ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾನೆ. ಆರೋಪಿ ಮದ್ಯವ್ಯಸನಿಯಾಗಿದ್ದು, ಘಟನೆ ಬಳಿಕ ಪರಾರಿಯಾಗಿದ್ದಾನೆ. ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಇದು ಮಕ್ಕಳ ಮೇಲಿನ ಹಿಂಸಾಚಾರದ ಗಂಭೀರ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ.

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ
ಸಾವು Image Credit source: ipleaders
ನಯನಾ ರಾಜೀವ್
|

Updated on: Mar 29, 2026 | 2:19 PM

Share

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು.

ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ ಹಿಂತಿರುಗಿದ ಬಳಿಕ ತನ್ನ ಮಗಳಿಗೆ ಮರದ ಕೋಲಿನಿಂದ ಹೊಡೆಯಲು ಶುರು ಮಾಡಿದ್ದ. ಹುಡುಗಿಯ ತಾಯಿ ಆರತಿ ನೀಡಿದ ದೂರಿನ ಪ್ರಕಾರ, ತಾನು ಪದೇ ಪದೇ ಮಧ್ಯಪ್ರವೇಶಿಸಲು ಪ್ರಯತ್ನಿಸಿದರೂ ಆಕೆಗೆ ಹೊಡೆಯುವುದನ್ನು ಬಿಡಲೇ ಇಲ್ಲ.

ತಂದೆ ಕ್ರೂರವಾಗಿ ಆಕೆಗೆ ಥಳಿಸಿದಾಗ ಪೂಜಾಳ ತಲೆಗೆ ಗಂಭೀರವಾದ ಗಾಯವಾಗಿದ್ದು, ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಸಹಾಯ ಮಾಡುವ ಬದಲು, ತಂದೆ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಮನೆಯೊಳಗೆ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದ, ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಕೂಗಾಟದ ನಂತರ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಮತ್ತಷ್ಟು ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ದೇಹದ ಮೇಲೆ ತಲೆ ಮುರಿದಿರುವುದು ಸೇರಿದಂತೆ ಸುಮಾರು 10 ರಿಂದ 12 ಗಾಯಗಳ ಗುರುತುಗಳು ಕಂಡುಬಂದಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ಪ್ರಸ್ತುತ ಆತ ಪರಾರಿಯಾಗಿದ್ದಾನೆ. ಕೆಲವು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂಥದ್ದೇ ಘಟನೆ ನಡೆದಿತ್ತು.

ಕಳ್ಳತನದ ಅನುಮಾನದ ಮೇಲೆ ತಂದೆಯೊಬ್ಬರು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಹಿಂಸಿಸಿದ್ದರು , ಘಟನೆಯಲ್ಲಿ ಒಬ್ಬಳು ಮಗಳು ಪ್ರಾಣ ಕಳೆದುಕೊಂಡಿದ್ದಾರೆ.ದಾದು ಹೈಬತ್ ಯಮ್ಗರ್ ಎಂದು ಗುರುತಿಸಲಾದ ಆರೋಪಿ, 10 ವರ್ಷದ ಸಾನಿಕಾ ಮತ್ತು 11 ವರ್ಷದ ಅನುಜಾ ಅವರನ್ನು ಕಟ್ಟಿಹಾಕಿ ಅವರ ಮನೆಯೊಳಗೆ ತಲೆಕೆಳಗಾಗಿ ನೇತುಹಾಕಿದ್ದ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್