ಅಂಬಾಲಾ-ಚಂಡೀಗಢ ಎಕ್ಸ್‌ಪ್ರೆಸ್‌ವೇಯಲ್ಲಿ ಮೂರು ಬಸ್‌ಗಳು ಡಿಕ್ಕಿ: ಐವರು ಸಾವು, 10 ಮಂದಿಗೆ ಗಾಯ

ಅಂಬಾಲಾ-ಚಂಡೀಗಢ ಎಕ್ಸ್‌ಪ್ರೆಸ್‌ವೇಯಲ್ಲಿ ಮೂರು ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಆರೋಗ್ಯ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.

ಅಂಬಾಲಾ-ಚಂಡೀಗಢ ಎಕ್ಸ್‌ಪ್ರೆಸ್‌ವೇಯಲ್ಲಿ ಮೂರು ಬಸ್‌ಗಳು ಡಿಕ್ಕಿ: ಐವರು ಸಾವು, 10 ಮಂದಿಗೆ ಗಾಯ
ಅಪಘಾತದ ದೃಶ್ಯ
Edited By:

Updated on: Dec 27, 2021 | 12:07 PM

ಅಂಬಾಲಾ: ಡಿಸೆಂಬರ್ 27 ರ ಮುಂಜಾನೆ ಅಂಬಾಲಾ-ಚಂಡೀಗಢ ಎಕ್ಸ್‌ಪ್ರೆಸ್‌ವೇಯಲ್ಲಿ (Ambala-Chandigarh expressway)  ಮೂರು ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಆರೋಗ್ಯ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ. ಜಮ್ಮುವಿನಿಂದ ಉತ್ತರ ಪ್ರದೇಶ ಮತ್ತು ದೆಹಲಿಗೆ ಹೋಗುವ ಬಸ್ಸುಗಳು ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇಗುಲದಿಂದ ಕಾರ್ಮಿಕರು ಮತ್ತು ಭಕ್ತರನ್ನು ಕರೆದೊಯ್ಯುತ್ತಿದ್ದವು. ಸುಲ್ತಾನ್‌ಪುರ ಚೌಕ್‌ನಲ್ಲಿರುವ ಮಲ್ಟಿ-ಸ್ಪೆಷಾಲಿಟಿ ಹೀಲಿಂಗ್ ಟಚ್ ಆಸ್ಪತ್ರೆ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬಂದ ಮೂರನೇ ಬಸ್ ಈಗಾಗಲೇ ಅಪಘಾತಕ್ಕೀಡಾದ ಎರಡು ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ.

ಹರ್ಯಾಣದ ಅಂಬಾಲಾ-ದೆಹಲಿ ಹೆದ್ದಾರಿಯಲ್ಲಿರುವ ಹೀಲಿಂಗ್ ಟಚ್ ಆಸ್ಪತ್ರೆ ಬಳಿ ಇಂದು ಮುಂಜಾನೆ ಸಂಭವಿಸಿದ ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಬಸ್ ದೆಹಲಿ ಕಡೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಎಎಸ್‌ಐ ನರೇಶ್ ಹೇಳಿದ್ದಾರೆ.

“ಸ್ಥಳದಲ್ಲಿದ್ದ ಬಸ್‌ಗೆ ಡಿಕ್ಕಿ ಹೊಡೆದ ಬಸ್‌ನ ಚಾಲಕ ನಿದ್ರೆಗೆ ಜಾರಿದ ಕಾರಣ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆ ಮತ್ತು ಹೀಲಿಂಗ್ ಟಚ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಂಚಾರ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರವಣ್ ತಿಳಿಸಿದ್ದಾರೆ. ಬಲದೇವ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಜೀನ್ಸ್ ಧರಿಸಿ ಮೊಬೈಲ್ ಇಟ್ಟುಕೊಂಡಿರುವ ಹುಡುಗಿಯರು ಮೋದಿಯಿಂದ ಪ್ರಭಾವಿತರಾಗುವುದಿಲ್ಲ: ದಿಗ್ವಿಜಯ ಸಿಂಗ್

Published On - 11:57 am, Mon, 27 December 21