ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಪಘಾತದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದು, ರಾಜ್ಯ ಸರ್ಕಾರವು ಕೂಡ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನಾನು ದೇವರಲ್ಲಿ ಪ್ರಾರ್ಥನೆ ಮಾಡುವೆ, ಸಾವನ್ನಪ್ಪಿರುವವ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಜತೆಗೆ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ಇಂದು ಮುಂಜಾನೆ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು , 26 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಇತರ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಜನರನ್ನು ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬರು ಕೂಡ ಸಹಾಯಕ್ಕೆ ಬಂದಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
Deeply saddened by the devastating bus mishap in Buldhana, Maharashtra. My thoughts and prayers are with the families of those who lost their lives. May the injured recover soon. The local administration is providing all possible assistance to the affected: PM @narendramodi
— PMO India (@PMOIndia) July 1, 2023
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಪೊಲೀಸರು ಶಂಕಿಸಿರುವ ಪ್ರಕಾರ ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದು, ಅಲ್ಲಿದ್ದ ಡಿವೈಡರ್ಗೂ ಕೂಡ ಡಿಕ್ಕಿ ಹೊಡೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ ಬಸ್ ಚಾಲಕ ಟೈರ್ ಒಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 34 ಪ್ರಯಾಣಿಕರಲ್ಲಿ 26 ಜನರು ಸಾವನ್ನಪ್ಪಿದ್ದು ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಜನ ಸಾಯುತ್ತಿದ್ದರು, ಸಹಾಯಕ್ಕಾಗಿ ಅಂಗಲಾಚಿದರೂ ನಿಲ್ಲದೇ ಹೋದವು ಕಾರುಗಳು; ಮಹಾ ಬಸ್ ದುರಂತದಲ್ಲಿ ಬದುಕುಳಿದವರ ಅಳಲು
ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದ್ದಾರೆ. ಇದರ ಜತೆಗೆ ಈ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.
बुलढाणा जिल्ह्यातील सिंदखेडराजाजवळ समृद्धी महामार्गावर खाजगी बसच्या झालेल्या भीषण अपघाताबद्दल मुख्यमंत्री एकनाथ शिंदे यांनी तीव्र दुःख व्यक्त केले आहे. या अपघातातील मृत आणि त्यांच्या कुटुंबिंयांप्रति सहवेदना प्रकट करुन या दुर्दैवी घटनेतील मृतांच्या नातेवाईकांना मुख्यमंत्री…
— CMO Maharashtra (@CMOMaharashtra) July 1, 2023
ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್ ಬುಕ್ ಮೂಲಕ ಸಂತಾಪ ಸೂಚಿಸಿದ್ದಾರೆ. ಟಿವಿ9 ವರದಿ ಮಾಡಿದ ನಂತರ, ಈ ಬಗ್ಗೆ ಫೇಸ್ ಬುಕ್ನಲ್ಲಿ ಟಿವಿ9 ವೆಬ್ ಸೈಟ್ ಮಾಡಿದ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.